ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೋಕ್ಸೊ ಕಾಯ್ದೆ: ಆರೋಪಿಗೆ ನಿರೀಕ್ಷಣಾ ಜಾಮೀನು

Last Updated 27 ಜುಲೈ 2020, 21:20 IST
ಅಕ್ಷರ ಗಾತ್ರ

ಬೆಂಗಳೂರು: ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದಲ್ಲಿ ಪೋಕ್ಸೊ ಕಾಯ್ದೆಯಡಿ ಬಂಧಿತನಾದ ಆರೋಪಿಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಚಿತ್ರದುರ್ಗದ ಶಿಕ್ಷಕರೊಬ್ಬರ ವಿರುದ್ಧ ವಿದ್ಯಾರ್ಥಿನಿಯೊಬ್ಬಳ ತಾಯಿ ಪ್ರಕರಣ ದಾಖಲಿಸಿದ್ದರು. ‘ಅಪ್ರಾಪ್ತರ ಮೇಲಿನ ಲೈಂಗಿಕ ದೌರ್ಜನ್ಯ ತಡೆಯಲು ಪೋಕ್ಸೋ ಕಾಯ್ದೆ ಜಾರಿಗೊಳಿಸಲಾಗಿದೆ. ಇದರ ಅಡಿಯಲ್ಲಿ ದಾಖಲಾದ ಪ್ರಕರಣದಲ್ಲಿ ಆರೋಪಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಲು ಅವಕಾ ಶವಿಲ್ಲ’ ಎಂದು ಸರ್ಕಾರಿ ವಕೀಲರು ವಾದಿಸಿದರು. ವಿಚಾರಣೆ ನಡೆಸಿದ ನ್ಯಾಯ ಮೂರ್ತಿ ಮೈಕಲ್ ಡಿ. ಕುನ್ಹಾ ಅವರಿದ್ದ ಏಕಸದಸ್ಯ ಪೀಠ, ‘ಪೋಕ್ಸೊ ಕಾಯ್ದೆಯ ನಿಯಮಗಳ ಅನುಸಾರ ಪ್ರಕರಣ ದಾಖಲಾದ ತಕ್ಷಣ ದೂರುದಾರರ ಹೇಳಿಕೆಗಳನ್ನು ದಾಖಲಿಸಿಕೊಳ್ಳಬೇಕು. ಈ ಪ್ರಕರಣದಲ್ಲಿ ಆರೋಪಿ ವಿರುದ್ಧ ಮೇ ತಿಂಗಳಲ್ಲಿಯೇ ದೂರು ದಾಖಲಾಗಿದ್ದರೂ, ದೂರು ದಾರರು ಮತ್ತು ಎಫ್‌ಐಆರ್‌ನಲ್ಲಿ ಉಲ್ಲೇ ಖಿಸಲಾದ ಆರು ವಿದ್ಯಾರ್ಥಿನಿಯರ ಹೇಳಿಕೆಗಳನ್ನು ಏಕೆ ದಾಖಲಿಸಿಕೊಂಡಿಲ್ಲ’ ಎಂದು ಪೊಲೀಸರನ್ನು ಪ್ರಶ್ನಿಸಿತು.

‘ಶಿಕ್ಷಕ ಕರ್ತವ್ಯದಲ್ಲಿ ಮುಂದು ವರಿದಿದ್ದು, ಬಂಧನಕ್ಕೂ ಪೊಲೀಸರು ಕ್ರಮ ಕೈಗೊಂಡಿಲ್ಲ. ಹೀಗಾಗಿ ನಿರೀ ಕ್ಷಣಾ ಜಾಮೀನು ಮಂಜೂರು ಮಾಡು ವುದರಿಂದ ತನಿಖೆಗೆ ಅಡ್ಡಿ ಆಗುವುದಿಲ್ಲ’ ಎಂದು ಪೀಠ ಅಭಿಪ್ರಾಯಪಟ್ಟಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT