ಬೆಂಗಳೂರು: ಪೋಕ್ಸೊ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬ ಶೌಚಾಲಯ ಸ್ವಚ್ಚಗೊಳಿಸುವ ರಾಸಾಯನಿಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೆಂಗೇರಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಕೆಂಗೇರಿ ನಿವಾಸಿ ಅಂಬರೀಶ್(50) ಆತ್ಮಹತ್ಯೆ ಮಾಡಿಕೊಂಡ ಆರೋಪಿ. ಕೆಂಗೇರಿಯಲ್ಲಿ ಒಂದೂವರೆ ತಿಂಗಳ ಹಿಂದೆ ಬಾಲಕಿ ಮೇಲೆ ಆರೋಪಿ ಲೈಂಗಿಕ ದೌರ್ಜನ್ಯ ಎಸಗಿದ್ದ. ಪೋಷಕರು ಆರೋಪಿಯ ವಿರುದ್ಧ ಕೆಂಗೇರಿ ಠಾಣೆಯಲ್ಲಿ ದೂರು ನೀಡಿದ್ದು, ಪೊಲೀಸರು ಆತನ ವಿರುದ್ಧ ಪೋಕ್ಸೊ ಪ್ರಕರಣ ದಾಖಲಿಸಿಕೊಂಡಿದ್ದರು.

ಈ ವಿಚಾರ ತಿಳಿದ ಆರೋಪಿ ತಲೆಮರೆಸಿಕೊಂಡಿದ್ದ. ಒಂದೆರಡು ದಿನಗಳ ಹಿಂದಷ್ಟೇ ಕೆಂಗೇರಿಗೆ ವಾಪಸ್ ಆಗಿದ್ದ. ಭಾನುವಾರ ರಾತ್ರಿ ಮನೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.