ಬೆಂಗಳೂರು: ನೃತ್ಯ ತರಬೇತಿಯ ಬಗ್ಗೆ ಮಾಹಿತಿ ನೀಡುವುದಾಗಿ ಬಾಲಕಿಯನ್ನು ಕಾರಿಗೆ ಹತ್ತಿಸಿಕೊಂಡು ಲೈಂಗಿಕ ಕಿರುಕುಳ ನೀಡಿದ್ದ ಆರೋಪದ ಅಡಿ ನೃತ್ಯ ಶಿಕ್ಷಕ ಭಾರತಿ ಕಣ್ಣನ್ (28) ಎಂಬಾತನನ್ನು ಕಾಡುಗೋಡಿ ಠಾಣೆಯ ಪೊಲೀಸರು ಗುರುವಾರ ಬಂಧಿಸಿದ್ದಾರೆ.

ಬಾಲಕಿ ಕುಟುಂಬದವರು ನೀಡಿದ ದೂರು ಆಧರಿಸಿ, ತನಿಖೆ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದುಕೊಂಡು ಬಂಧಿಸಲಾಯಿತು. ಆರೋಪಿಯ ವಿರುದ್ಧ ಪೋಕ್ಸೊ(ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ) ಕಾಯ್ದೆ ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದರು.

‘ಮೇ 24ರಂದು ಕಾಡುಗೋಡಿ ಬಳಿ ರಸ್ತೆಯಲ್ಲಿ ಬಾಲಕಿ ನಡೆದುಕೊಂಡು ಹೋಗುತ್ತಿದ್ದಳು. ಅದೇ ಮಾರ್ಗದಲ್ಲಿ ಕಾರಿನಲ್ಲಿ ಬಂದಿದ್ದ ಆರೋಪಿ ತಾನು ನೃತ್ಯ ಶಿಕ್ಷಕ ಎಂಬುದಾಗಿ ಪರಿಚಯಿಸಿಕೊಂಡಿದ್ದ. ನೃತ್ಯ ತರಬೇತಿ ತರಗತಿ ಬಗ್ಗೆ ಮಾಹಿತಿ ನೀಡುವುದಾಗಿ ಬಾಲಕಿಗೆ ಹೇಳಿದ್ದ. ಆರೋಪಿಯ ಮಾತು ನಂಬಿದ್ದ ಬಾಲಕಿ, ಕಾರು ಹತ್ತಿದ್ದಳು. ಬಾಲಕಿ ಕಾರಿನೊಳಗೆ ಕುಳಿತ ಬಳಿಕ ಲಾಕ್ ಮಾಡಿಕೊಂಡಿದ್ದ. ಸ್ವಲ್ಪ ದೂರಕ್ಕೆ ಕರೆದೊಯ್ದು ಕಾರನ್ನು ನಿಲುಗಡೆ ಮಾಡಿದ್ದ. ಅಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ’ ಎಂದು ಪೊಲೀಸರು ತಿಳಿಸಿದರು.

ಅದೇ ಸ್ಥಳಕ್ಕೆ ಬಿಟ್ಟು ಪರಾರಿ:

ಲೈಂಗಿಕ ಕಿರುಕುಳ ನೀಡಿದ ಬಳಿಕ ಬಾಲಕಿಯನ್ನು ಕಾರು ಹತ್ತಿಸಿಕೊಂಡಿದ್ದ ಸ್ಥಳಕ್ಕೆ ವಾಪಸ್ ಕರೆತಂದು ಬಿಟ್ಟು ಆರೋಪಿ ಪರಾರಿ ಆಗಿದ್ದ. ಘಟನೆಯ ಕುರಿತು ಪೋಷಕರಿಗೆ ಬಾಲಕಿ ಮಾಹಿತಿ ನೀಡಿದ್ದಳು. ನಂತರ, ಪೋಷಕರು ಪೊಲೀಸರಿಗೆ ದೂರು ನೀಡಿದ್ದರು.

ಈ ದೂರಿನ ಬೆನ್ನಲ್ಲೇ ಘಟನಾ ಸ್ಥಳದ ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾಗಳ ದೃಶ್ಯಾವಳಿ ಪರಿಶೀಲಿಸಿದಾಗ ಆರೋಪಿಯ ಕಾರಿನ ನೋಂದಣಿ ಸಂಖ್ಯೆ ಪತ್ತೆಯಾಗಿತ್ತು. ಆ ಸುಳಿವು ಆಧರಿಸಿ ಭಾರತಿ ಕಣ್ಣನ್ನನ್ನು ಪತ್ತೆ ಮಾಡಿ ಬಂಧಿಸಲಾಯಿತು ಎಂದು ಪೊಲೀಸರು ಹೇಳಿದರು.

ವಿವಾಹಿತನಾದ ಭಾರತಿ ಕಣ್ಣನ್ಗೆ ಒಂದು ಮಗುವಿದೆ. ನ್ಯಾಯಾಲಯವು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು, ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.