ಬೆಂಗಳೂರು: ಹಣದ ಆಸೆಗೆ 15 ವರ್ಷದ ಮಗಳನ್ನು ವೇಶ್ಯಾವಾಟಿಕೆಗೆ ದೂಡಿದ್ದ ತಾಯಿ ಹಾಗೂ ಮಲತಂದೆಯ ವಿರುದ್ಧ ಚಂದ್ರಾಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಾಲಕಿಯ ತಾಯಿ, ಆಕೆಯ ಮಲತಂದೆ ಹಾಗೂ ಮತ್ತೊಬ್ಬ ಮಹಿಳೆಯನ್ನು ವಶಕ್ಕೆ ಪಡೆದು ಪೊಲೀಸರು ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.

ತಾಯಿ ಹಾಗೂ ಮಲತಂದೆ ಕಾರಿನಲ್ಲಿ ಪ್ರತಿದಿನ ಬಾಲಕಿಯನ್ನು ಮಹಿಳೆಯ ಮನೆಗೆ ಕರೆದೊಯ್ದು ಬಿಡುತ್ತಿದ್ದರು. ಅಲ್ಲಿ ಬಾಲಕಿ ಸಂಜೆವರೆಗೂ ಇರುತ್ತಿದ್ದಳು. ಅಲ್ಲಿ ಬಾಲಕಿಯ ಮೇಲೆ ದೌರ್ಜನ್ಯ ಎಸಗಲಾಗುತ್ತಿತ್ತು ಎಂದು ಮೂಲಗಳು ಹೇಳಿವೆ.

‘ಬಾಲಕಿಯನ್ನು ರಕ್ಷಿಸಲಾಗಿದೆ. ಆರೋಪಿಗಳ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ’ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.