ಭಾನುವಾರ, 21 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ನಿವೃತ್ತ ಪಿಎಸ್ಐ ಬಂಧನ

Published 16 ಆಗಸ್ಟ್ 2023, 2:20 IST
Last Updated 16 ಆಗಸ್ಟ್ 2023, 2:20 IST
ಅಕ್ಷರ ಗಾತ್ರ

ಬೆಂಗಳೂರು: ಏಳು ವರ್ಷ ವಯಸ್ಸಿನ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದಡಿ ನಿವೃತ್ತ ಪಿಎಸ್ಐ ಅಬ್ದುಲ್ ಹಫೀಜ್‌ನನ್ನು (74) ಶಿವಾಜಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

'ಠಾಣೆ ವ್ಯಾಪ್ತಿಯ ನಿವಾಸಿ ಅಬ್ದುಲ್ ಹಫೀಜ್ ವಿರುದ್ಧ ಬಾಲಕಿಯ ಪೋಷಕರು ದೂರು ನೀಡಿದ್ದಾರೆ. ಮಕ್ಕಳ ಮೇಲಿನ‌ ಲೈಂಗಿಕ ದೌರ್ಜನ್ಯ ತಡೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು, ಆರೋಪಿಯನ್ನು ಸೆರೆ ಹಿಡಿಯಲಾಗಿದೆ. ಸದ್ಯ ಆರೋಪಿ ನ್ಯಾಯಾಂಗ ಬಂಧನದಲ್ಲಿದ್ದಾನೆ’ ಎಂದು ಪೊಲೀಸರು ಹೇಳಿದರು.

‘ಬಾಲಕಿಯು ತನ್ನ ಮನೆ ಬಳಿ ಸೋಮವಾರ ಸಂಜೆ ಆಟವಾಡುತ್ತಿದ್ದಳು. ಅವಳನ್ನು ತನ್ನ ಬಳಿ ಕರೆದಿದ್ದ ಆರೋಪಿ, ಪುಸಲಾಯಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದ. ವಿಷಯ ಗೊತ್ತಾಗುತ್ತಿದ್ದಂತೆ ಪೋಷಕರು ಹಾಗೂ ಸ್ಥಳೀಯರು, ಆರೋಪಿ ಮನೆ ಎದುರು ಜಮಾಯಿಸಿ ತರಾಟೆಗೆ ತೆಗೆದುಕೊಂಡಿದ್ದರು’ ಎಂದರು.

‘ಸ್ಥಳಕ್ಕೆ ಹೋಗಿದ್ದ ಗಸ್ತು ವಾಹನದ ಸಿಬ್ಬಂದಿ, ಆರೋಪಿಯನ್ನು ವಶಕ್ಕೆ ಪಡೆದು ಠಾಣೆಗೆ ಕರೆತಂದಿದ್ದರು. ಆರೋಪಿ ಎಸಗಿದ್ದ ಕೃತ್ಯವನ್ನು ಬಾಲಕಿಯು ಪೋಷಕರ ಎದುರು ಹೇಳಿಕೊಂಡಿದ್ದಳು. ನಂತರವೇ ಪೋಷಕರು ಠಾಣೆಗೆ ಬಂದು ದೂರು ನೀಡಿದ್ದರು’ ಎಂದು ಪೊಲೀಸರು ತಿಳಿಸಿದರು.

‘ಬಾಲಕಿ ಹಾಗೂ ಆರೋಪಿಯನ್ನು ಪ್ರತ್ಯೇಕವಾಗಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ವರದಿ ಬರಬೇಕಿದೆ. ಕೃತ್ಯದ ಸಂಬಂಧ ಬಾಲಕಿಯಿಂದಲೂ ಹೇಳಿಕೆ ಪಡೆಯಲಾಗಿದೆ' ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT