ಕರುಣಾನಿಧಿ ನಿಧನ ನಗರದಲ್ಲಿ ಬಿಗಿ ಭದ್ರತೆ

7

ಕರುಣಾನಿಧಿ ನಿಧನ ನಗರದಲ್ಲಿ ಬಿಗಿ ಭದ್ರತೆ

Published:
Updated:

ಬೆಂಗಳೂರು: ‘ಡಿಎಂಕೆ ನಾಯಕ, ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ.ಕರುಣಾನಿಧಿ ನಿಧನದಿಂದ ನಗರದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಮಿಳು ಭಾಷಿಕರು ಹೆಚ್ಚಾಗಿ ನೆಲೆಸಿರುವ ಪ್ರದೇಶಗಳಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ’ ಎಂದು ನಗರ ಪೊಲೀಸ್ ಕಮಿಷನರ್ ಟಿ.ಸುನೀಲ್ ಕುಮಾರ್ ತಿಳಿಸಿದರು.

‘ಪ್ರಜಾವಾಣಿ’ ಜತೆ ಮಾತನಾಡಿದ ಅವರು, ‘ಸಾವಿನ ಸುದ್ದಿ ತಿಳಿಯುತ್ತಿದ್ದಂತೆಯೇ ಆಯಾ ವಿಭಾಗಗಳ ಡಿಸಿಪಿಗಳಿಗೆ ಭದ್ರತೆಗೆ ಕ್ರಮ ತೆಗೆದುಕೊಳ್ಳುವಂತೆ ಸಂದೇಶ ರವಾನಿಸಲಾಯಿತು ಎಂದರು.

ಸೂಕ್ಷ್ಮ ಪ್ರದೇಶಗಳಲ್ಲಿ ಕೆಎಸ್‌ಆರ್‌ಪಿ ಹಾಗೂ ಸಿಎಆರ್ ತುಕಡಿಗಳನ್ನು ಹಾಕಲಾಗಿದೆ. ಶ್ರೀರಾಂಪುರ, ಓಕಳಿಪುರ, ಗಾಂಧಿನಗರ, ಕಲಾಸಿಪಾಳ್ಯ, ಬಿನ್ನಿಮಿಲ್‌, ಹಲಸೂರು, ಟ್ಯಾನರಿ ರಸ್ತೆ, ಕೆ.ಆರ್.ಪುರ ಭಾಗಗಳಲ್ಲಿ ಪೊಲೀಸ್ ಗಸ್ತು ಹೆಚ್ಚಿಸಲಾಗಿದೆ’ ಎಂದು ಮಾಹಿತಿ ನೀಡಿದರು.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !