ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಂಗಳೂರು: ರಾಷ್ಟ್ರಮಟ್ಟದ ಆರ್ಚರಿ ಚಾಂಪಿಯನ್‌ಷಿಪ್ ಟೂರ್ನಿಗೆ ಚಾಲನೆ

Published 31 ಜನವರಿ 2024, 21:35 IST
Last Updated 31 ಜನವರಿ 2024, 21:35 IST
ಅಕ್ಷರ ಗಾತ್ರ

ಬೆಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ‘12ನೇ ಅಖಿಲ ಭಾರತ ಪೊಲೀಸ್ ಆರ್ಚರಿ ಚಾಂಪಿಯನ್​ಷಿಪ್ ಟೂರ್ನಿ’ಗೆ ಗೃಹ ಸಚಿವ ಜಿ. ಪರಮೇಶ್ವರ್ ಅವರು ಮಂಗಳವಾರ ಚಾಲನೆ ನೀಡಿದರು.

ರಾಜ್ಯ ಪೊಲೀಸ್ ಇಲಾಖೆ ವತಿಯಿಂದ ಕೋರಮಂಗಲದಲ್ಲಿರುವ ರಾಜ್ಯ ಮೀಸಲು ಪೊಲೀಸ್ ಪಡೆಯ (ಕೆಎಸ್‌ಆರ್‌ಪಿ) ಮೈದಾನದಲ್ಲಿ ಟೂರ್ನಿ ಹಮ್ಮಿಕೊಳ್ಳಲಾಗಿದೆ. ಫೆಬ್ರುವರಿ 4ರವರೆಗೂ ಟೂರ್ನಿ ನಡೆಯಲಿದೆ. ಕರ್ನಾಟಕ, ಅಸ್ಸಾಂ, ಬಿಹಾರ, ಗುಜರಾತ್, ತಮಿಳುನಾಡು, ತೆಲಂಗಾಣ ಸೇರಿ ದೇಶದ 24 ರಾಜ್ಯಗಳ ಪೊಲೀಸ್ ತಂಡಗಳು ಟೂರ್ನಿಯಲ್ಲಿ ಭಾಗವಹಿಸಿವೆ. 

ಪರಮೇಶ್ವರ್ ಮಾತನಾಡಿ, ‘ಇದೇ ಮೊದಲ ಬಾರಿಗೆ ಕರ್ನಾಟಕದಲ್ಲಿ ಟೂರ್ನಿ ಆಯೋಜನೆ ಮಾಡಿರುವುದು ಹೆಮ್ಮೆಯ ವಿಷಯ. ಆರ್ಚರಿಯಲ್ಲಿ ಕರ್ನಾಟಕದ ತಂಡ ಇರಲಿಲ್ಲ. ರಾಜ್ಯ ಪೊಲೀಸ್ ಮಹಾನಿರ್ದೇಶಕರು, ಇಲಾಖೆಯಲ್ಲಿರುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸಿ ಟೂರ್ನಿಯಲ್ಲಿ ಪಾಲ್ಗೊಳ್ಳುವಂತೆ ಮಾಡಿದ್ದಾರೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT