ಶನಿವಾರ, ಅಕ್ಟೋಬರ್ 23, 2021
20 °C

ಆನೆ ದಂತಗಳ ಮಾರಾಟಕ್ಕೆ ಯತ್ನ: ಇಬ್ಬರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಆನೆ ದಂತಗಳನ್ನು ಮಾರಲು ಯತ್ನಿಸುತ್ತಿದ್ದ ಆರೋಪದಡಿ ಇಬ್ಬರನ್ನು ಅನ್ನಪೂರ್ಣೇಶ್ವರಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

‘ಸುಹೇಬ್ ಹಾಗೂ ಮೊಹಮ್ಮದ್ ಕೈಫ್ ಬಂಧಿತರು. ಅವರಿಂದ ಎರಡು ದಂತಗಳನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಹೊರ ರಾಜ್ಯದಿಂದ ದಂತಗಳನ್ನು ತಂದಿದ್ದ ಆರೋಪಿಗಳು, ನಗರದಲ್ಲಿ ಗ್ರಾಹಕರಿಗಾಗಿ ಹುಡುಕಾಡುತ್ತಿದ್ದರು. ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಅವರಿಬ್ಬರ ಬಗ್ಗೆ ಭಾತ್ಮಿದಾರರೊಬ್ಬರು ಮಾಹಿತಿ ನೀಡಿದ್ದರು. ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೃತ್ಯ ಬಯಲಾಯಿತು’ ಎಂದೂ ತಿಳಿಸಿದರು.

‘ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದೂ ವಿವರಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು