ಬುಧವಾರ, ಏಪ್ರಿಲ್ 21, 2021
30 °C

ಪೊಲೀಸರ ಎದುರೇ ಪ್ಯಾಂಟ್ ಬಿಚ್ಚಿ ಅಸಭ್ಯ ವರ್ತನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ತನ್ನನ್ನು ವಶಕ್ಕೆ ಪಡೆಯಲು ಬಂದ ಪೊಲೀಸರ ಎದುರೇ ಆರೋಪಿಯೊಬ್ಬ ಪ್ಯಾಂಟ್ ಬಿಚ್ಚಿ ಅಸಭ್ಯವಾಗಿ ವರ್ತಿಸಿರುವ ಘಟನೆ ಹುಳಿಮಾವು ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

‘ಠಾಣೆ ವ್ಯಾಪ್ತಿಯಲ್ಲಿ ಬೇಕರಿ ಮಾಲೀಕರ ಜೊತೆ ಜಗಳ ಮಾಡಿಕೊಂಡು ಅಸಭ್ಯವಾಗಿ ವರ್ತಿಸಿದ್ದ ಆರೋಪದಡಿ ನಾಗೇಶ್ ಎಂಬಾತನನ್ನು ಬಂಧಿಸಲಾಗಿದೆ. ಇದೀಗ ಆತ, ನ್ಯಾಯಾಂಗ ಬಂಧನದಲ್ಲಿದ್ದಾನೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ಸ್ಥಳೀಯ ನಿವಾಸಿ ನಾಗೇಶ್, ಕುಡಿದ‌ ಅಮಲಿನಲ್ಲಿ ಫೆ. 26ರಂದು ರಾತ್ರಿ ಬಸವನಪುರ ವೃತ್ತ ಬಳಿಯ ಬೇಕರಿಯೊಂದಕ್ಕೆ ಹೋಗಿ ಗಲಾಟೆ ಮಾಡಿದ್ದ. ಬೇಕರಿ ಮಾಲೀಕ ಹರೀಶ್ ನಿಯಂತ್ರಣ ಕೊಠಡಿಗೆ ಮಾಹಿತಿ ನೀಡಿದ್ದರು. ಗಸ್ತಿನಲ್ಲಿದ್ದ ಸಿಬ್ಬಂದಿ, ಸ್ಥಳಕ್ಕೆ ಹೋಗಿದ್ದರು.’

‘ಪೊಲೀಸರ ಜೊತೆ ಜಗಳ ತೆಗೆದು ಅವಾಚ್ಯ ಶಬ್ದಗಳಿಂದ ನಿಂದಿಸಿ ಸಮವಸ್ತ್ರ ಹಿಡಿದು ಎಳೆದಾಡಿದ್ದ ಆರೋಪಿ, ಪ್ಯಾಂಟ್ ಬಿಚ್ಚಿ ಅಸಭ್ಯವಾಗಿ ವರ್ತಿಸಿದ್ದ. ಪತ್ನಿ ಹಾಗೂ ಮಕ್ಕಳನ್ನು ಸ್ಥಳಕ್ಕೆ ಕರೆಸಿದ್ದ ಆರೋಪಿ, ಹೊಯ್ಸಳ ಗಸ್ತು ವಾಹನದ ಮುಂದೆ ಮಲಗಿ ಪ್ರತಿಭಟನೆ ಮಾಡುವಂತೆ ಹೇಳಿದ್ದ’ ಎಂದೂ ಪೊಲೀಸ್ ಮೂಲಗಳು ತಿಳಿಸಿವೆ.

‘ಸ್ಥಳೀಯರ ಸಹಾಯದಿಂದ ನಾಗೇಶ್‌ನನ್ನು ಠಾಣೆಗೆ ಕರೆತಂದು ವಿಚಾರಣೆ ನಡೆಸಿ ಬಂಧಿಸಲಾಯಿತು’ ಎಂದೂ ಮೂಲಗಳು ಹೇಳಿವೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.