ಭಾನುವಾರ, ನವೆಂಬರ್ 29, 2020
20 °C
ಪೊಲೀಸ್ ಹುತಾತ್ಮ ದಿನಾಚರಣೆ

ಕೋವಿಡ್‌ನಿಂದ ಮೃತಪಟ್ಟ ಪೊಲೀಸರಿಗೆ ₹30 ಲಕ್ಷ ಪರಿಹಾರ: ಬಿ.ಎಸ್. ಯಡಿಯೂರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ಕೊರೊನಾ ಸೋಂಕು ಹರಡುತ್ತಿರುವ ನಡುವೆಯೂ ಪೊಲೀಸರು ಜೀವದ ಹಂಗು ತೊರೆದು ಕರ್ತವ್ಯ ನಿರ್ವಹಿಸಿದ್ದಾರೆ. 85 ಮಂದಿ ಅಧಿಕಾರಿ–ಸಿಬ್ಬಂದಿ ಕೋವಿಡ್‌ನಿಂದ ಮೃತಪಟ್ಟಿದ್ದಾರೆ. ಅವರ ಕುಟುಂಬ ಸದಸ್ಯರಿಗೆ ₹30 ಲಕ್ಷ ಪರಿಹಾರ ದೊರೆಯಲಿದೆ’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

ಪೊಲೀಸ್ ಹುತಾತ್ಮ ದಿನಾಚರಣೆ ಅಂಗವಾಗಿ ನಗರ ಸಶಸ್ತ್ರ ಮೀಸಲು ಪಡೆಯ ಉದ್ಯಾನದಲ್ಲಿ ಬುಧವಾರ ಹುತಾತ್ಮ ಪೊಲೀಸರಿಗೆ ಗೌರವ ವಂದನೆ ಸಲ್ಲಿಸಿ ಮಾತನಾಡಿದ ಅವರು, ‘ಪೊಲೀಸರು ಲಾಕ್‌ಡೌನ್ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಿದ್ದಾರೆ. ಬೆಂಗಳೂರಿನಲ್ಲಿ 345 ಸೇರಿ ರಾಜ್ಯದಾದ್ಯಂತ 580 ಚೆಕ್‌ಪೋಸ್ಟ್‌ ನಿರ್ಮಿಸಿ ಕೊರೊನಾ ನಿಯಂತ್ರಿಸಿದ್ದಾರೆ’ ಎಂದರು.

‘ರಾಜ್ಯದಲ್ಲಿ 8,900 ಪೊಲೀಸರು ಸೋಂಕಿತರಾಗಿದ್ದಾರೆ. ಇವರ ಕುಟುಂಬದ 500 ಮಂದಿ ಸದಸ್ಯರಿಗೂ ಸೋಂಕು ತಗುಲಿದೆ’ ಎಂದರು.

ರಾಜ್ಯದ 17 ಮಂದಿ ಸೇರಿ ದೇಶದಾದ್ಯಂತ 264 ಮಂದಿ ಪೊಲೀಸ್ ಅಧಿಕಾರಿ-ಸಿಬ್ಬಂದಿ ಕರ್ತವ್ಯದ ವೇಳೆ ಮೃತಪಟ್ಟಿದ್ದಾರೆ ಎಂದು ಹೇಳಿದರು.

ಹುತಾತ್ಮರಾದ ಎಲ್ಲ ಅಧಿಕಾರಿ-ಸಿಬ್ಬಂದಿಗೆ ಗೌರವ ವಂದನೆ ಸಲ್ಲಿಸಲಾಯಿತು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು