ಬುಧವಾರ, 29 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚರ್ಚ್‌ ಪ್ರಾರ್ಥನೆಯಲ್ಲಿ ಪೊಲೀಸ್‌ ಕಮಿಷನರ್‌: ಚರ್ಚೆಗೆ ಗ್ರಾಸವಾದ ವಿಡಿಯೊ

ದೇವಸ್ಥಾನ, ಗುರುದ್ವಾರಕ್ಕೂ ಭೇಟಿ ಕೊಟ್ಟಿದ್ದ ಭಾಸ್ಕರರಾವ್
Last Updated 11 ಮೇ 2020, 19:42 IST
ಅಕ್ಷರ ಗಾತ್ರ

ಬೆಂಗಳೂರು: ಲಾಕ್‌ಡೌನ್ ಸಂದರ್ಭದಲ್ಲಿ ನಗರ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಅವರು ಚರ್ಚ್‌ ಒಂದರಲ್ಲಿ ಸಾಮೂಹಿಕ ಪ್ರಾರ್ಥನೆಯಲ್ಲಿಭಾಗಿಯಾರುವ ವಿಡಿಯೊ ತುಣುಕು ಸಾಮಾಜಿಕ ಜಾಲ ತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಚರ್ಚ್, ಮಸೀದಿ, ದೇವಸ್ಥಾನಗಳ ಬಂದ್‌ಗೆ ಆದೇಶ ನೀಡಿದ್ದ ಭಾಸ್ಕರ್ ರಾವ್, ಈಗ ತಾವೇ ಚರ್ಚ್‌ನಲ್ಲಿ ಪ್ರಾರ್ಥನೆಯಲ್ಲಿ ಭಾಗಿಯಾಗಿದ್ದಾರೆ ಎಂಬ ಟೀಕೆ ವ್ಯಕ್ತವಾಗಿದೆ. ಜೊತೆಗೆ ಪೊಲೀಸ್ ಸಿಬ್ಬಂದಿ ಹಾಗೂ ಇತರೆ ಅಧಿಕಾರಿಗಳು ಕಮಿಷನರ್ ಜೊತೆಗಿರುವುದೂ ವಿಡಿಯೊದಲ್ಲಿದೆ.

ಚರ್ಚ್‌ನಲ್ಲಿ ಫಾದರ್‌ ಅವರ ಸಮೀಪ ಸ್ವಲ್ಪ ಅಂತರದಲ್ಲಿ ನಿಂತು ಪ್ರಾರ್ಥನೆಯಲ್ಲಿಭಾಗಿಯಾಗಿದ್ದಾರೆ. ಆ ಮೂಲಕ, ಅಂತರ ಕಾಪಾಡಿಕೊಳ್ಳಲಾಗಿದೆ. ಆದರೆ, ಪ್ರಾರ್ಥನೆಯಲ್ಲಿ ಭಾಗಿಯಾದ ಬಹುತೇಕರು ಮಾಸ್ಕ್ ಧರಿಸಿರಲಿಲ್ಲ.

ಲಾಕ್‌ಡೌನ್ ನಡುವೆಯೇ ಅವರು ಪೂರ್ಣಪ್ರಜ್ಞ ವಿದ್ಯಾಪೀಠಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದು, ಗುರುದ್ವಾರದ ಪ್ರಾರ್ಥನೆಯಲ್ಲಿ ಕುಳಿತಿರುವುದು, ಶಿವಾಜಿನಗರದ ನರಸಿಂಹಸ್ವಾಮಿ ಮಂದಿರದಲ್ಲಿ ಪ್ರಾರ್ಥನೆ ಮಾಡುತ್ತಿರುವ ವಿಡಿಯೊ ಮತ್ತು ಚಿತ್ರಗಳು ಕೂಡಾ ವೈರಲ್ ಆಗಿವೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಕೊರೊನಾ ಸಂದರ್ಭದಲ್ಲಿ ಎಲ್ಲ ಸಮುದಾಯಗಳ ಧಾರ್ಮಿಕ ಸ್ಥಳ ಹಾಗೂ ಪ್ರಾರ್ಥನಾ ಮಂದಿರಗಳಿಗೂ ಭೇಟಿ ನೀಡಿ ಮುಖಂಡರನ್ನು ಭೇಟಿ ಮಾಡಿ ಸಹಕಾರ ಕೋರಿದ್ದೇನೆ. ಕೊರೊನಾ ವಿರುದ್ಧ ಹೋರಾಡುತ್ತಿರುವವರಿಗಾಗಿ ಪ್ರಾರ್ಥಿಸಿದ್ದೇನೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT