ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜ. 28ರಂದು ಸಶಸ್ತ್ರ ಪೊಲೀಸ್ ಕಾನ್‌ಸ್ಟೆಬಲ್‌ ಹುದ್ದೆಗೆ ಪರೀಕ್ಷೆ

Published 23 ಜನವರಿ 2024, 16:11 IST
Last Updated 23 ಜನವರಿ 2024, 16:11 IST
ಅಕ್ಷರ ಗಾತ್ರ

ಬೆಂಗಳೂರು: ಸಶಸ್ತ್ರ ಪೊಲೀಸ್ ಕಾನ್‌ಸ್ಟೆಬಲ್‌ (ಸಿಎಆರ್‌/ ಡಿಎಆರ್) (ಪುರುಷ) 3,064 ಹುದ್ದೆಗಳ ನೇಮಕಾತಿಗಾಗಿ ಜ.28ರಂದು ನಗರದ 78 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಅಂದು ಬೆಳಿಗ್ಗೆ 11ರಿಂದ ಮಧ್ಯಾಹ್ನ 12.30ರ ವರೆಗೆ ಪರೀಕ್ಷೆ ನಡೆಯಲಿದೆ.

42,740 ಅಭ್ಯರ್ಥಿಗಳಿಗಾಗಿ ಲಿಖಿತ ಪರೀಕ್ಷೆ ನಡೆಯಲಿದೆ ಎಂದು ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಅಭ್ಯರ್ಥಿಗಳು ಅರ್ಧ ತೋಳಿನ ಅಂಗಿಯನ್ನು ಕಡ್ಡಾಯವಾಗಿ ಧರಿಸಬೇಕು. ಜಿಪ್ ಪ್ಯಾಕೆಟ್‌ಗಳು, ದೊಡ್ಡ ಬಟನ್‌ಗಳು ಇರುವ ಅಂಗಿಗಳನ್ನು ಧರಿಸಿ ಬರಲು ಅವಕಾಶ ಇಲ್ಲ. ಪರೀಕ್ಷಾ ಕೇಂದ್ರದ ಒಳಕ್ಕೆ ಶೂ ನಿಷೇಧಿಸಲಾಗಿದ್ದು, ಅಭ್ಯರ್ಥಿಗಳು ತೆಳುವಾದ ಅಡಿಭಾಗವಿರುವ ಚಪ್ಪಲಿ ಧರಿಸಿ ಬರಬೇಕು ಎಂದು ಸೂಚಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT