ಶುಕ್ರವಾರ, 1 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು | ರಾತ್ರಿ ಓಡಾಟ: ಪೊಲೀಸರ ವಿಶೇಷ ಗಸ್ತು

Published 5 ಡಿಸೆಂಬರ್ 2023, 16:12 IST
Last Updated 5 ಡಿಸೆಂಬರ್ 2023, 16:12 IST
ಅಕ್ಷರ ಗಾತ್ರ

ಬೆಂಗಳೂರು: ನಗರದಲ್ಲಿ ರಾತ್ರಿ ವೇಳೆ ಅಪರಾಧಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರು ವಿಶೇಷ ಗಸ್ತು ಆರಂಭಿಸಿದ್ದು, ಅನುಮಾನಾಸ್ಪದ ರೀತಿಯಲ್ಲಿ ಸುತ್ತಾಡುವವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಗರ ಪೊಲೀಸ್‌ ಕಮಿಷನರ್‌ ಬಿ. ದಯಾನಂದ್, ‘ಬಾರ್‌ ಆ್ಯಂಡ್ ರೆಸ್ಟೊರೆಂಟ್, ಬೇಕರಿ, ಟೀ ಅಂಗಡಿ, ವಸತಿಗೃಹಗಳು ಹಾಗೂ ಇತರೆ ಸ್ಥಳಗಳಲ್ಲಿ ರಾತ್ರಿ ವೇಳೆ ಅಪರಾಧಗಳು ಹೆಚ್ಚಾಗುತ್ತಿವೆ. ಇದೇ ಕಾರಣಕ್ಕೆ ಕಾನೂನು ಸುವ್ಯವಸ್ಥೆ ಹಾಗೂ ಸಿಸಿಬಿ ಪೊಲೀಸರು ಜಂಟಿಯಾಗಿ ವಿಶೇಷ ಗಸ್ತು ನಡೆಸಿದ್ದರು’ ಎಂದರು.

‘ಡಿ. 3ರಂದು ರಾತ್ರಿ 577 ಮದ್ಯದ ಅಂಗಡಿಗಳು, 969 ಬಾರ್ ಆ್ಯಂಡ್ ರೆಸ್ಟೊರೆಂಟ್, 704 ವಸತಿಗೃಹ, 1682 ಬೇಕರಿ ಹಾಗೂ ಇತರೆ 715 ಸ್ಥಳಗಳಲ್ಲಿ ಪರಿಶೀಲನೆ ನಡೆಸಲಾಗಿದೆ. 5,111 ಮಂದಿಯನ್ನು ವಿಚಾರಣೆಗೆ ಒಳಪಡಿಸಲಾಯಿತು. ನೋಂದಣಿ ಸಂಖ್ಯೆ ಫಲಕ ಬದಲಾವಣೆ ಪತ್ತೆಗಾಗಿ 4,282 ವಾಹನಗಳನ್ನು ತಪಾಸಣೆ ನಡೆಸಲಾಯಿತು’ ಎಂದು ಹೇಳಿದರು.

ಡ್ರಗ್ಸ್ ಪ್ರಕರಣದಲ್ಲಿ 47 ಮಂದಿ ಬಂಧನ: ‘ಡ್ರಗ್ಸ್ ಸಾಗಣೆ, ಮಾರಾಟ ಹಾಗೂ ಸೇವನೆ ವಿರುದ್ಧ ಕಾರ್ಯಾಚರಣೆ ಮುಂದುವರಿಸಲಾಗಿದೆ. ನವೆಂಬರ್‌ನಲ್ಲಿ 8 ವಿದೇಶಿಯರು ಸೇರಿದಂತೆ 47 ಮಂದಿಯನ್ನು ಬಂಧಿಸಲಾಗಿದೆ. ಈ ಸಂಬಂಧ 32 ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ’ ಎಂದು ದಯಾನಂದ್ ತಿಳಿಸಿದರು.

‘ಬಂಧಿತರಿಂದ ₹ 10.86 ಕೋಟಿ ಮೌಲ್ಯದ ಗಾಂಜಾ, ಎಂಡಿಎಂಎ, ಎಕ್ಸ್‌ಟೆಸ್ಸಿ ಜಪ್ತಿ ಮಾಡಲಾಗಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT