ಬುಧವಾರ, ಅಕ್ಟೋಬರ್ 21, 2020
24 °C

ಮಹಿಳೆ ಮೈ ಮೇಲೆ ಕಾದ ಎಣ್ಣೆ ಎರಚಿದ್ದ ರೌಡಿ ಕಾಲಿಗೆ ಗುಂಡೇಟು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸಿಗರೇಟ್ ಹಣ ಕೇಳಿದ್ದಕ್ಕೆ ಕಾದ ಎಣ್ಣೆ ಎರಚಿದ್ದ ರೌಡಿ ಸೈಯದ್ ಹನೀಫ್ ಎಂಬಾತನನ್ನು ಕಾಲಿಗೆ ಗುಂಡು ಹಾರಿಸಿ ಸಂಪಿಗೆಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಅಮರ ಜ್ಯೋತಿ ಲೇಔಟ್ ನಿವಾಸಿ ಮೇಘನಾ ಎಂಬುವರ ಮೈ ಮೇಲೆ ಕಾದ ಎಣ್ಣೆ ಎರಚಿ ಪರಾರಿಯಾಗಿದ್ದ. ಮಾರ್ಗಮಧ್ಯೆಯೂ ಶ್ರೀನಿವಾಸ್ ಎಂಬುವರ ಕಾರು ಅಡ್ಡಗಟ್ಟಿ ಬಿಯರ್ ಬಾಟಲಿಯಿಂದ ಹೊಡೆದು ಹೋಗಿದ್ದ.

ಶನಿವಾರ ತನ್ನನ್ನು ಬಂಧಿಸಲು ಹೋದ ಪೊಲೀಸರ ಮೇಲೆಯೇ ಡ್ರ್ಯಾಗರ್‌ನಿಂದ ಹಲ್ಲೆ ಮಾಡಲು ಮುಂದಾಗಿದ್ದ. ಇನ್‌ಸ್ಪೆಕ್ಟರ್ ಮಲ್ಲಿಕಾರ್ಜುನ ಅವರು ಆರೋಪಿ ಕಾಲಿಗೆ ಗುಂಡು ಹಾರಿಸಿ ಸೆರೆ ಹಿಡಿದಿದ್ದಾರೆ.

ಹಲವು ಅಪರಾಧ ಕೃತ್ಯಗಳಲ್ಲಿ ಆರೋಪಿ ಭಾಗಿಯಾಗಿದ್ದ. ಡ್ರ್ಯಾಗರ್ ಹಾಗೂ ಇತರೆ ಆಯುಧಗಳನ್ನು ಜೊತೆಯಲ್ಲೇ ಇಟ್ಟುಕೊಂಡು ಓಡಾಡುತ್ತಿದ್ದ. ಗುಂಡೇಟಿನಿಂದ ಗಾಯಗೊಂಡಿರುವ ಆತನನ್ನು ಅಂಬೇಡ್ಕರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಾಗಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಗಾಯಗೊಂಡಿರುವ ಮಹಿಳೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು