ರೌಡಿ ಕಾಲಿಗೆ ಪೊಲೀಸರ ಗುಂಡೇಟು
ಬೆಂಗಳೂರು: ಕೊಲೆಗೆ ಯತ್ನ, ಸುಲಿಗೆ ಹಾಗೂ ಅಪಹರಣ ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡು ಓಡಾಡುತ್ತಿದ್ದ ರೌಡಿ ಅಜಯ್ ಅಲಿಯಾಸ್ ಮನು ಎಂಬಾತನನ್ನು ಕಾಲಿಗೆ ಗುಂಡು ಹಾರಿಸಿ ಪೊಲೀಸರು ಸೆರೆ ಹಿಡಿದಿದ್ದಾರೆ.
12ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಅಜಯ್, ಪೊಲೀಸರಿಂದ ತಪ್ಪಿಸಿಕೊಂಡು ಓಡಾಡುತ್ತಿದ್ದ. ಭಾನುವಾರ ಆತ ದೇವನಹಳ್ಳಿ ಬಳಿಯ ಕೋರಮಂಗಲ ಸಮೀಪದಲ್ಲಿದ್ದ, ಆ ಬಗ್ಗೆ ಮಾಹಿತಿ ಬರುತ್ತಿದ್ದಂತೆ ಚನ್ನರಾಯನಪಟ್ಟಣ ಠಾಣೆ ಪಿಎಸ್‌ಐ ನಂದೀಶ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ಹೋಗಿದ್ದರು.
ಪೊಲೀಸರನ್ನು ನೋಡಿ ಪರಾರಿಯಾಗಲು ಯತ್ನಿಸಿದ್ದ ರೌಡಿ, ಕಾನ್‌ಸ್ಟೆಬಲ್ ನಾರಾಯಣಸ್ವಾಮಿ ಎಂಬುವರ ಮೇಲೆ ಹಲ್ಲೆ ನಡೆಸಿದ್ದ. ಕಾನ್‌ಸ್ಟೆಬಲ್ ರಕ್ಷಣೆಗೆ ಹೋದ ಪಿಎಸ್‌ಐ ನಂದೀಶ್, ಶರಣಾಗುವಂತೆ ರೌಡಿಗೆ ಎಚ್ಚರಿಕೆ ನೀಡಿದ್ದ. ಅದಕ್ಕೆ ಒಪ್ಪದ ರೌಡಿ, ಪಿಎಸ್‌ಐ ಮೇಲೆ ಹಲ್ಲೆಗೆ ಮುಂದಾಗಿದ್ದ. ಅದೇ ವೇಳೆಯೇ ಪಿಎಸ್ಐ, ರೌಡಿ ಕಾಲಿಗೆ ಗುಂಡು ಹೊಡೆದಿದ್ದರು. ಕುಸಿದು ಬಿದ್ದ ರೌಡಿಯನ್ನು ಪೊಲೀಸರೇ ದೇವನಹಳ್ಳಿ ಸಾರ್ವಜನಿಕ ಆಸ್ಪತ್ರೆಗೆ ತಂದು ದಾಖಲಿಸಿದ್ದಾರೆ. ಘಟನಾ ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಡಿವೈಎಸ್ಪಿ ರಂಗಪ್ಪ ಹಾಗೂ ಇನ್‌ಸ್ಪೆಕ್ಟರ್ ಮಲ್ಲಿಕಾರ್ಜುನ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.