ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು: ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ, ನಾಲ್ವರು ಬಾಲಕರು ವಶಕ್ಕೆ

Published 24 ಫೆಬ್ರುವರಿ 2024, 14:13 IST
Last Updated 24 ಫೆಬ್ರುವರಿ 2024, 14:13 IST
ಅಕ್ಷರ ಗಾತ್ರ

ಬೆಂಗಳೂರು: ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪದಡಿ ನಾಲ್ವರು ಬಾಲಕರನ್ನು ಆಡುಗೋಡಿ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.

‘ಫೆ. 17ರಂದು ರಾತ್ರಿ ನಡೆದಿರುವ ಘಟನೆ ಸಂಬಂಧ ಮಹಿಳೆ ದೂರು ನೀಡಿದ್ದರು. ತನಿಖೆ ಕೈಗೊಂಡು ಬಾಲಕರನ್ನು ವಶಕ್ಕೆ ಪಡೆಯಲಾಗಿದೆ’ ಎಂದು ಪೊಲೀಸರು ಹೇಳಿದರು.

‘ಸ್ಥಳೀಯ ನಿವಾಸಿಯಾಗಿರುವ 25 ವರ್ಷದ ಮಹಿಳೆ, ಮನೆ ಪಕ್ಕದ ರಸ್ತೆ ಬಳಿ ಕಸ ಎಸೆಯಲು ಹೋಗಿದ್ದರು. ಆಗ, ಸಾರ್ವಜನಿಕ ಸ್ಥಳದಲ್ಲಿ ಕಸ ಎಸೆಯುವ ವಿಚಾರವಾಗಿ ಬಾಲಕರು ಹಾಗೂ ಮಹಿಳೆ ನಡುವೆ ಮಾತಿನ ಚಕಮಕಿ ನಡೆದಿತ್ತು.’

‘ಮಹಿಳೆಯನ್ನು ನಿಂದಿಸಿದ್ದ ಬಾಲಕರು, ಅಂಗಾಂಗಗಳನ್ನು ಮುಟ್ಟಿ ಲೈಂಗಿಕ ದೌರ್ಜನ್ಯ ಎಸಗಿದ್ದರೆಂದು ಗೊತ್ತಾಗಿದೆ. ಕೃತ್ಯದ ಬಳಿಕ ಪರಾರಿಯಾಗಿದ್ದರು. ಬಾಲಕರನ್ನು ಸಿ.ಸಿ.ಟಿ.ವಿ ಕ್ಯಾಮೆರಾ ದೃಶ್ಯಗಳು ಹಾಗೂ ಇತರೆ ಪುರಾವೆಗಳನ್ನು ಆಧರಿಸಿ ವಶಕ್ಕೆ ಪಡೆಯಲಾಗಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT