ಬುಧವಾರ, ಡಿಸೆಂಬರ್ 2, 2020
23 °C

ಅಕ್ರಮವಾಗಿ ಸಾಗಿಸುತ್ತಿದ್ದ 6 ಕೆ.ಜಿ 55 ಗ್ರಾಂ ಚಿನ್ನ ಜಪ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 6 ಕೆ.ಜಿ. 55 ಗ್ರಾಂ ಚಿನ್ನಾಭರಣವನ್ನು ಸಿಟಿ ಮಾರ್ಕೆಟ್ ಪೊಲೀಸರು ಜಪ್ತಿ ಮಾಡಿದ್ದಾರೆ.

ಶುಕ್ರವಾರ ರಾತ್ರಿ ಇಬ್ಬರು ಆರೋಪಿಗಳು, ಕೋರಿಯರ್ ಬ್ಯಾಗ್‌ನಲ್ಲಿ ಚಿನ್ನಾಭರಣ ಇಟ್ಟುಕೊಂಡು ದ್ವಿಚಕ್ರ ವಾಹನದಲ್ಲಿ ಹೊರಟಿದ್ದರು. ಗಸ್ತಿನಲ್ಲಿದ್ದ ಸಿಬ್ಬಂದಿ, ದೊಡ್ಡಪೇಟೆ ವೃತ್ತದಲ್ಲಿ  ಆರೋಪಿಗಳನ್ನು ತಡೆದು ವಿಚಾರಣೆ ನಡೆಸಿದಾಗ ಚಿನ್ನಾಭತಣ ಪತ್ತೆ ಆಗಿದೆ.

ಚಿನ್ನಾಭರಣ ಸಾಗಿಸುತ್ತಿದ್ದ ಆರೋಪಿಗಳಾದ ಮುಂಬೈನ ದಲ್ವತ್‌ಸಿಂಗ್ (34) ಹಾಗೂ ರಾಜಸ್ಥಾನದ ವಿಕಾಸ್ (35) ಎಂಬುವರನ್ನು ಬಂಧಿಸಲಾಗಿದೆ. ಆರೋಪಿಗಳು, ಚಿನ್ನಾಭರಣಕ್ಕೆ ಯಾವುದೇ ದಾಖಲೆ ನೀಡಿಲ್ಲ. ಚಿನ್ನಾಭರಣ ಮೂಲದ ಬಗ್ಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಇದನ್ನು ಓದಿ: ಸಂಪಾದಕರ ಮಾತು | ಪ್ರಜಾವಾಣಿ ಆಂಡ್ರಾಯ್ಡ್ ಮತ್ತು ಐಒಎಸ್ ಆ್ಯಪ್ ಲೋಕಾರ್ಪಣೆ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು