‘ಪಕ್ಷದ ಸಭೆ, ಸಮಾರಂಭ ಹಾಗೂ ಗಣ್ಯರು ಭೇಟಿ ನೀಡಿದ ಸಂದರ್ಭದಲ್ಲಿ ಮಾತ್ರ ಕಚೇರಿಯಲ್ಲಿ ಮೆಟಲ್ ಡಿಟೆಕ್ಟರ್ ಅಳವಡಿಸಲಾಗುತ್ತಿತ್ತು. ಈಗ ಕಾಯಂ ಆಗಿ ಅಳವಡಿಸಿ, ಕಚೇರಿಗೆ ಬರುವವರನ್ನೆಲ್ಲ ತಪಾಸಣೆ ನಡೆಸಿ ಒಳಗೆ ಬಿಡಲಾಗುವುದು. ನಿಷೇಧಿತ ವಸ್ತುಗಳನ್ನು ಪ್ರವೇಶ ದ್ವಾರದಲ್ಲೇ ಪತ್ತೆ ಹಚ್ಚಲಾಗುತ್ತದೆ. ಇದಕ್ಕಾಗಿಯೇ ಒಬ್ಬರು ಸಹಾಯಕ ಪೊಲೀಸ್ ಸಬ್ ಇನ್‌ಸ್ಪೆಕ್ಟರ್, ಮೂವರು ಕಾನ್‌ಸ್ಟೆಬಲ್‌ಗಳನ್ನು ನಿಯೋಜಿಸಲಾಗಿದೆ. ಗಂಟೆಗೊಮ್ಮೆ ಠಾಣಾಧಿಕಾರಿ ಭೇಟಿ ನೀಡುತ್ತಾರೆ’ ಎಂದು ಪಿಎಸ್‌ಐ ಜಗದೀಶ್ ತಿಳಿಸಿದರು.