ಸೋಮವಾರ, 20 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೆಲಮಂಗಲ | ನಕಲಿ ಉತ್ಪನ್ನ ತಯಾರಿಕಾ ಘಟಕಕ್ಕೆ ಪೊಲೀಸ್‌ ದಾಳಿ

Published 12 ಜನವರಿ 2024, 16:13 IST
Last Updated 12 ಜನವರಿ 2024, 16:13 IST
ಅಕ್ಷರ ಗಾತ್ರ

ನೆಲಮಂಗಲ: ಪ್ರತಿಷ್ಠಿತ ಕಂಪನಿಗಳ ಹೆಸರಿನ ನಕಲಿ ಟೀ ಪುಡಿ ಮತ್ತು ಡಿಟರ್ಜೆಂಟ್ ತಯಾರಿಸುತ್ತಿದ್ದ ಘಟಕದ ಮೇಲೆ ದಾಳಿ ಮಾದನಾಯಕನಹಳ್ಳಿ ಪೊಲೀಸರು ದಾಳಿ ನಡೆಸಿ, ಒಬ್ಬರನ್ನು ಬಂಧಿಸಿದರು.

ತ್ರಿರೋಸಸ್, ರಿನ್, ಸರ್ಫ್‌ ಎಕ್ಸೆಲ್‌ ಕಂಪನಿಗಳ ಕವರ್‌ಗಳಲ್ಲಿ ಮಾರಾಟ ಮಾಡಲಾಗುತ್ತಿದ್ದ ನಕಲಿ ಟೀ ಪುಡಿ, ಸಾಬೂನು ಪೊಟ್ಟಣಗಳನ್ನು ಮತ್ತು ಅವುಗಳ ತಯಾರಿಕೆಗೆ ಬಳಸುತ್ತಿದ್ದ ಯಂತ್ರಗಳನ್ನು ಪೊಲೀಸರು ವಶಕ್ಕೆ ಪಡೆದರು.

ಮಾದನಾಯಕನಹಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯ ಗಂಗೊಂಡನಹಳ್ಳಿಯಲ್ಲಿ ನಕಲಿ ಟೀ ಪುಡಿ, ಡಿಟೆರ್ಜಂಟ್‌ಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದ ಬಗ್ಗೆ ಹಿಂದೂಸ್ಥಾನ್‌ ಯುನಿಲಿವರ್‌ ಕಂಪನಿ ಅಧಿಕಾರಿಗಳು ದೂರು ನೀಡಿದ್ದರು. ಪೊಲೀಸರು ದಾಳಿ ಮಾಡಿದಾಗ ರಾಜಸ್ಥಾನದ ಬೋಮಾರಾಮ್‌ (22) ಸಿಕ್ಕಿಬಿದ್ದಿದ್ದಾನೆ. ಮಾಲೀಕನನ್ನು ಪತ್ತೆ ಹಚ್ಚಲು ಬಲೆ ಬೀಸಲಾಗಿದೆ ಎಂದು ಸಬ್‌ ಇನ್‌ಸ್ಪೆಕ್ಟರ್‌ ಪ್ರಶಾಂತ್‌ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT