ಶನಿವಾರ, ಮಾರ್ಚ್ 6, 2021
32 °C

ನಿವೃತ್ತ ಡಿಜಿಪಿ ಆರ್‌.ಪಿ.ಶರ್ಮಾ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪೊಲೀಸ್ ನಿವೃತ್ತ ಡಿಜಿಪಿ ಆರ್‌.ಪಿ.ಶರ್ಮಾ (60) ಅವರು ಅನಾರೋಗ್ಯ ಸಮಸ್ಯೆಯಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ಸಂಜೆ ನಿಧನರಾದರು.

ಪೊಲೀಸ್ ಗೃಹ ಮಂಡಳಿಯ ಡಿಜಿಪಿಯಾಗಿ ಕಾರ್ಯನಿರ್ವಹಿಸಿದ್ದ ಶರ್ಮಾ ಅವರು ಕಳೆದ ಡಿಸೆಂಬರ್‌ನಲ್ಲಿ ನಿವೃತ್ತಿಯಾಗಿದ್ದರು. ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಇವರು ದೊಡ್ಡಗುಬ್ಬಿಯ ಹೆಣ್ಣೂರು ವೃತ್ತದ ಬಳಿ ವಾಸವಿದ್ದರು.

ಇವರಿಗೆ ಪತ್ನಿ, ಇಬ್ಬರು ಮಕ್ಕಳು ಇದ್ದಾರೆ. ಹೆಬ್ಬಾಳದಲ್ಲಿ ಗುರುವಾರ ಮಧ್ಯಾಹ್ನ 12 ಗಂಟೆಗೆ ಅಂತ್ಯಕ್ರಿಯೆ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಕಳೆದ ಸೆಪ್ಟೆಂಬರ್‌ನಲ್ಲಿ ತಮ್ಮ ನಿವಾಸದಲ್ಲಿ ರಿವಾಲ್ವರ್‌ ಸ್ವಚ್ಛಗೊಳಿಸುತ್ತಿದ್ದಾಗ ಆಕಸ್ಮಿಕವಾಗಿ ಗುಂಡು ತಗುಲಿ ಶರ್ಮಾ ಗಾಯಗೊಂಡಿದ್ದರು. ಇವರು 1987ನೇ ಬ್ಯಾಚ್‌ನ ಅಧಿಕಾರಿ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು