ಸೋಮವಾರ, ಜೂನ್ 14, 2021
28 °C

ರಸ್ತೆಯುದ್ದಕ್ಕೂ ಪೊಲೀಸ್ ಕಾವಲು: ನಿಯಂತ್ರಣದಲ್ಲಿ ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

A policeman takes notes next to burnt police vehicles in Bangalore on August 12, 2020

ಬೆಂಗಳೂರು: ಗಲಭೆ ನಡೆದಿದ್ದ ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಹಾಗೂ ಕಾವಲ್ ಭೈರಸಂದ್ರದ ರಸ್ತೆಯುದ್ದಕ್ಕೂ ಪೊಲೀಸರನ್ನು ನಿಯೋಜಿಸಲಾಗಿದೆ‌. ಇಡೀ ಪ್ರದೇಶ ಪೊಲೀಸರ ನಿಯಂತ್ರಣದಲ್ಲಿ ಇದೆ.

ಕಿಡಿಗೇಡಿಗಳು ಸುಟ್ಟು ಹಾಕಿರುವ ವಾಹನಗಳನ್ನು ಪೊಲೀಸರು ರಸ್ತೆ ಬದಿಯಲ್ಲಿ ಹಾಕಿದ್ದಾರೆ. ಇಡೀ ಪ್ರದೇಶದಲ್ಲಿ ವಾಹನಗಳ ಓಡಾಟ ಮಿತಿಗೊಳಿಸಲಾಗಿದ್ದು, ಪ್ರತಿಯೊಂದು ವಾಹನಗಳನ್ನು ತಪಾಸಣೆ ಮಾಡಿ ಬಿಡಲಾಗುತ್ತಿದೆ‌.

ಠಾಣೆಯಲ್ಲೇ ಮೊಕ್ಕಾಂ, 137ಕ್ಕೆ ಏರಿದ ಬಂಧಿತರ ಸಂಖ್ಯೆ;
ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಹಿರಿಯ ಅಧಿಕಾರಿಗಳು ಕೆ.ಜಿ.ಹಳ್ಳಿ ಠಾಣೆಯಲ್ಲೇ ಮೊಕ್ಕಾಂ ಹೂಡಿದ್ದಾರೆ.  
ಗಳಭೆ ಸೃಷ್ಟಿಸಿದ ಆರೋಪಿಗಳ ಪತ್ತೆಗೆ ಶೋಧ ಮುಂದುವರಿದಿದೆ. ಇದುವರೆಗೂ 137 ಮಂದಿಯನ್ನು ಬಂಧಿಸಲಾಗಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.

ಇನ್ನಷ್ಟು ಸುದ್ದಿ
ಡಿ.ಜೆ.ಹಳ್ಳಿ ಗಲಭೆ | ಗುಂಡೇಟಿಗೆ ಬಲಿಯಾದವರ ಸಂಖ್ಯೆ 3ಕ್ಕೆ ಏರಿಕೆ
ಡಿ.ಜೆ.ಹಳ್ಳಿ ಪ್ರಕರಣ: ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕ್ಕೆ ಬಿಎಸ್‌ವೈ ಆದೇಶ
ಅವಹೇಳನಕಾರಿ ಪೋಸ್ಟ್: ಆರೋಪಿ ನವೀನ್‌ ಬಂಧನ
 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು