ಗುರುವಾರ , ಮಾರ್ಚ್ 23, 2023
31 °C

₹1.28 ಕೋಟಿ ಮೌಲ್ಯದ ಗಾಂಜಾ ಜಪ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಬೆಂಗಳೂರು ಅಂತರರಾಷ್ಟ್ರೀಯ ಕೊರಿಯರ್ ಸೆಂಟರ್ ಮೇಲೆ ದಾಳಿ ನಡೆಸಿದ ಕಸ್ಟಮ್ಸ್ ಅಧಿಕಾರಿಗಳು ₹1.28 ಕೋಟಿ ಮೌಲ್ಯದ 8 ಕೆ.ಜಿ ಗಾಂಜಾ ವಶಕ್ಕೆ ಪಡೆದಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಬುಧವಾರ ರಾತ್ರಿ ದಾಳಿ ನಡೆಸಿದ ಅಧಿಕಾರಿಗಳು, ಅಲ್ಲಿದ್ದ ಗಾಂಜಾ ಜಪ್ತಿ ಮಾಡಿದ್ದಾರೆ.

11 ಕೆ.ಜಿ. ಗಾಂಜಾ ವಶ: ನಗರದ ಯುವಕರು ಹಾಗೂ ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬೇಗೂರು ಪೊಲೀಸರು ಬಂಧಿಸಿದ್ದು, ₹4.40 ಲಕ್ಷ ಮೌಲ್ಯದ 11 ಕೆ.ಜಿ ಗಾಂಜಾ ವಶಕ್ಕೆ ಪಡೆದಿದ್ದಾರೆ.

ಪಶ್ಚಿಮ ಬಂಗಾಳದ ಮೊಹಮ್ಮದ್ ರಿಪುನ್, ಮೋಹರ್ ಅಲಿ, ಮೊಹಮ್ಮದ್ ಆಲಂಗೀರ್ ಬಂಧಿತರು.

ಆರೋಪಿಗಳು ಪಶ್ಚಿಮ ಬಂಗಾಳದ ರೈತರಿಂದ ಗಾಂಜಾ ಪಡೆದು, ರೈಲಿನಲ್ಲಿ ಬೆಂಗಳೂರಿಗೆ ಬರುತ್ತಿದ್ದರು. ಇಲ್ಲಿನ ಯುವಕರು ಹಾಗೂ ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು