ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಾಖಲೆ ಇಲ್ಲದ ₹ 49.79 ಲಕ್ಷ ಜಪ್ತಿ

Last Updated 17 ಮಾರ್ಚ್ 2023, 3:31 IST
ಅಕ್ಷರ ಗಾತ್ರ

ಬೆಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ ₹49.79 ಲಕ್ಷ ಹಣವನ್ನು ಕಲಾಸಿಪಾಳ್ಯ ಠಾಣೆ ಪೊಲೀಸರು ಜಪ್ತಿ ಮಾಡಿದ್ದು, ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

‘ಊರ್ವಶಿ ಸಿನಿಮಂದಿರ ಬಳಿ ಕಾರಿನಲ್ಲಿ ಹಣ ಸಾಗಿಸಲಾಗುತ್ತಿತ್ತು. ಅನುಮಾನಗೊಂಡ ಸಿಬ್ಬಂದಿ ತಪಾಸಣೆ ನಡೆಸಿದ್ದರು. ಕಾರಿನಲ್ಲಿದ್ದ ಮೂವರು ಯಾವುದೇ ದಾಖಲೆ ನೀಡಿರಲಿಲ್ಲ. ಹೀಗಾಗಿ, ಹಣವನ್ನು ಜಪ್ತಿ ಮಾಡಲಾಗಿದೆ’ ಎಂದು ಪೊಲೀಸ್ ಕಮಿಷನರ್ ಪ್ರತಾಪ್ ರೆಡ್ಡಿ ಅವರು ತಿಳಿಸಿದರು.

‘ಹಣ ಯಾರಿಗೆ ಸೇರಿದ್ದು? ಎಲ್ಲಿಗೆ ಸಾಗಿಸಲಾಗುತ್ತಿತ್ತು? ಎಂಬುದು ಸದ್ಯಕ್ಕೆ ಗೊತ್ತಾಗಿಲ್ಲ. ಕರ್ನಾಟಕ ಪೊಲೀಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಆರೋಪಿಗಳಿಗೆ ನೋಟಿಸ್ ನೀಡಿ, ಪೊಲೀಸರು ತನಿಖೆ ಮುಂದುವರಿಸಿದ್ದಾರೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT