ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾನೂನು ಬಾಹಿರ ಚಟುವಟಿಕೆ | ವಿಶೇಷ ಕಾರ್ಯಾಚರಣೆ: 3,667 ಪ್ರಕರಣ ದಾಖಲು

Published 12 ಮೇ 2024, 16:10 IST
Last Updated 12 ಮೇ 2024, 16:10 IST
ಅಕ್ಷರ ಗಾತ್ರ

ಬೆಂಗಳೂರು: ಕಾನೂನು ಬಾಹಿರ ಚಟುವಟಿಕೆ ತಡೆಯಲು ಹಾಗೂ ನಿಯಮ ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳಲು ನಗರದ ಪೊಲೀಸರು ಶನಿವಾರ ವಿಶೇಷ ಕಾರ್ಯಾಚರಣೆ ನಡೆಸಿದ್ದು, ತಪ್ಪಿತಸ್ಥರ ವಿರುದ್ಧ 3,667 ಪ್ರಕರಣ ದಾಖಲಿಸಿಕೊಂಡಿದ್ದಾರೆ.

‘ಮದ್ಯದಂಗಡಿಗಳು, ಬಾರ್‌ ಆ್ಯಂಡ್ ರೆಸ್ಟೊರೆಂಟ್, ಚಹಾ ಅಂಗಡಿ, ಲಾಡ್ಜ್‌, ಪೇಯಿಂಗ್ ಗೆಸ್ಟ್ (ಪಿ.ಜಿ) ಕಟ್ಟಡಗಳು ಹಾಗೂ ಇತರೆಡೆ ಶೋಧ ನಡೆಸಲಾಯಿತು. ಕಾನೂನು ಉಲ್ಲಂಘಿಸಿದ್ದವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ನೋಟಿಸ್ ನೀಡಲಾಗಿದೆ’ ಎಂದು ಪೊಲೀಸರು ಹೇಳಿದರು.

‘734 ರೌಡಿಗಳು ಹಾಗೂ ಅಪರಾಧ ಹಿನ್ನೆಲೆಯುಳ್ಳ 434 ಮಂದಿಯನ್ನೂ ವಿಚಾರಣೆಗೆ ಒಳಪಡಿಸಲಾಯಿತು. ಅಪರಾಧಗಳಲ್ಲಿ ತೊಡಗದಂತೆ ಎಚ್ಚರಿಕೆ ನೀಡಲಾಯಿತು. ಮದ್ಯ ಕುಡಿದು ವಾಹನ ಚಲಾಯಿಸುತ್ತಿದ್ದ 196 ಚಾಲಕರ ವಿರುದ್ಧವೂ ಪ್ರಕರಣ ದಾಖಲಿಸಿಕೊಂಡು, ವಾಹನ ಜಪ್ತಿ ಮಾಡಲಾಗಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT