ಶನಿವಾರ, ಡಿಸೆಂಬರ್ 7, 2019
25 °C

ಪೊಲೀಸರ ಸಮಯ ಪ್ರಜ್ಞೆ: ಆತ್ಮಹತ್ಯೆಗೆ ಯತ್ನಿಸಿದ ನವ ದಂಪತಿ ಸಾವಿನಿಂದ ಪಾರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಬೆಂಗಳೂರು: ಪೊಲೀಸರ ಸಮಯ ಪ್ರಜ್ಞೆಯಿಂದ ನವ ದಂಪತಿ ಆತ್ಮಹತ್ಯೆಯಿಂದ ಪಾರಾಗಿದ್ದಾರೆ.

ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಬಾಲಾಜಿ ಮತ್ತು ಸೌಮ್ಯಾ ಸಾವಿನಿಂದ ಪಾರಾದ ದಂಪತಿ. ಗಿರಿನಗರದ ತಮ್ಮ ಮನೆಯಲ್ಲಿ ಮಂಗಳವಾರ ರಾತ್ರಿ ಅವರು ಆತ್ಮಹತ್ಯೆಗೆ ಯತ್ನಿಸಿದ್ದರು. 

ಇಬ್ಬರರೂ ಚಾಕುವಿನಿಂದ ಕತ್ತು ಕೊಯ್ದು ಕೊಂಡು ಆತ್ಮಹತ್ಯೆಗೆ ಮಾಡಿಕೊಳ್ಳಲು ಯತ್ನಿಸಿದ್ದರು. ಮೂರು ತಿಂಗಳ ಹಿಂದೆಯಷ್ಟೇ ವಿವಾಹವಾಗಿದ್ದ ಬಾಲಾಜಿ - ಸೌಮ್ಯಾ, ಕೌಟುಂಬಿಕ ಕಲಹ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿರುವ ಶಂಕೆ ವ್ಯಕ್ತವಾಗಿದೆ.

ಸ್ಥಳೀಯರಿಂದ ಮಾಹಿತಿ ಬಂದ ತಕ್ಷಣ ಸ್ಥಳಕ್ಕೆ ತೆರಳಿದ, ಗಸ್ತಿನಲ್ಲಿ ಇದ್ದ ಗಿರಿನಗರ ಸಬ್ ಇನ್ ಸ್ಪೆಕ್ಟರ್ ವಿನಯ್ ಮತ್ತು ಸಿಬ್ಬಂದಿ ದಂಪತಿಯನ್ನು ಆಸ್ಪತ್ರೆ ಸೇರಿಸಿದ್ದರು. ಇಬ್ಬರಿಗೂ ಶಸ್ತ್ರಚಿಕಿತ್ಸೆ ಮಾಡಲಾಗಿದ್ದು, ಪ್ರಾಣಪಾಯದಿಂದ ಪಾರಾಗಿದ್ದಾರೆ.

ಗಿರಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು