ಮಂಗಳವಾರ, 14 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ವಿರುದ್ಧ FIR ದಾಖಲಿಸಲು ಕಾನೂನು ತಜ್ಞರ ಮೊರೆ

ಸಚಿವ ಎಸ್‌.ಎಸ್‌.ಮಲ್ಲಿಕಾರ್ಜುನ್‌ ವಿರುದ್ಧ ಜಾತಿ ನಿಂದನೆ ದೂರು
Published 16 ಆಗಸ್ಟ್ 2023, 23:26 IST
Last Updated 16 ಆಗಸ್ಟ್ 2023, 23:26 IST
ಅಕ್ಷರ ಗಾತ್ರ

ಬೆಂಗಳೂರು: ಅವಹೇಳನಕಾರಿ ಪದ ಬಳಸಿ ಜಾತಿ ನಿಂದನೆ ಮಾಡಿರುವ ಆರೋಪದಡಿ ತೋಟಗಾರಿಕೆ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ವಿರುದ್ಧ ರಾಜಾಜಿನಗರ ಹಾಗೂ ವಿಧಾನಸೌಧ ಠಾಣೆಗೆ ಎರಡು ಪ್ರತ್ಯೇಕ ದೂರು ಸಲ್ಲಿಕೆಯಾಗಿದ್ದು, ಎಫ್‌ಐಆರ್‌ ದಾಖಲಿಸುವ ಸಂಬಂಧ ವಿಧಾನಸೌಧ ಠಾಣೆ ಪೊಲೀಸರು ಕಾನೂನು ತಜ್ಞರ ಸಲಹೆ ಕೇಳಿದ್ದಾರೆ.

‘ಸಚಿವರು ಜಾತಿ ನಿಂದನೆ ಮಾಡಿದ್ದಾರೆ. ಪರಿಶಿಷ್ಟ ಜಾತಿ–ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆ ಅಡಿ ಅವರ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ ದಿವಾಕರ್, ರಾಜಾಜಿನಗರ ಠಾಣೆಗೆ ದೂರು ನೀಡಿದ್ದರು. ಆ ದೂರನ್ನು ವಿಧಾನಸೌಧ ಠಾಣೆಗೆ ವರ್ಗಾಯಿಸಲಾಗಿದೆ. ಅಲ್ಲದೇ ಬನ್ನೇರುಘಟ್ಟ ರಸ್ತೆಯ ನಿವಾಸಿ ಯಶೋಧ ಅವರೂ ಸಚಿವರ ವಿರುದ್ಧ ವಿಧಾನಸೌಧ ಠಾಣೆಗೆ ದೂರು ನೀಡಿದ್ದಾರೆ’ ಎಂದು ಮೂಲಗಳು ತಿಳಿಸಿವೆ.

‘ಇದು ಸೂಕ್ಷ್ಮ ಪ್ರಕರಣ ಆಗಿರುವ ಕಾರಣಕ್ಕೆ ಎರಡೂ ದೂರು ಆಧರಿಸಿ ಕಾನೂನು‌ ತಜ್ಞರ ಸಲಹೆ ಕೇಳಲಾಗಿದೆ. ಅವರ ಅಭಿಪ್ರಾಯದಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದು ಪೊಲೀಸರು ಹೇಳಿದರು.

‘ಇಂತಹ ಹೇಳಿಕೆ ಸಹಿಸಲ್ಲ’

ಒಂದು ಸಮುದಾಯದ ಬಗ್ಗೆ ಕೀಳಾಗಿ ಮಾತನಾಡುವುದು ನಿಲ್ಲಿಸಬೇಕು. ಇಂತಹ ಹೇಳಿಕೆಗಳನ್ನು ನಾನು ಸಹಿಸಲ್ಲ’ ಎಂದು ಗೃಹ ಸಚಿವ ಜಿ. ಪರಮೇಶ್ವರ ಹೇಳಿದರು. ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರು ಅವಹೇಳನಕಾರಿ ಪದ ಬಳಸಿ ಜಾತಿ ನಿಂದನೆ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಸುದ್ದಿಗಾರರ ಜೊತೆ ಮಾತನಾಡಿದ ಅವರು ‌‘ಸಚಿವರೇ ಆಗಲಿ ಯಾರೇ ಆಗಲಿ ಕಾನೂ‌ನು ಕ್ರಮ ತೆಗೆದುಕೊಳ್ಳುತ್ತೇವೆ’ ಎಂದರು. ‘ಮಲ್ಲಿಕಾರ್ಜುನ್‌ ಅವರು ಏನು ಮಾತನಾಡಿದ್ದಾರೆಂದು ಗೊತ್ತಿಲ್ಲ. ಆದರೆ ಸಾರ್ವಜನಿಕ ಜೀವನದಲ್ಲಿ ಇದ್ದು ಕೀಳಾಗಿ ಮಾತನಾಡುವುದು ಸರಿಯಲ್ಲ. ನಟ ಉಪೇಂದ್ರ ಮತ್ತು ಮಲ್ಲಿಕಾರ್ಜುನ್‌ ಪ್ರಕರಣದ ಬಗ್ಗೆ ಮುಖ್ಯಮಂತ್ರಿ ಜೊತೆ ಚರ್ಚಿಸುತ್ತೇನೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT