ಶುಕ್ರವಾರ, ನವೆಂಬರ್ 27, 2020
23 °C

ಪಟಾಕಿ ಮಳಿಗೆ ಪರಿಶೀಲನೆ ನಡೆಸಿದ ಪೊಲೀಸರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ದೀಪಾವಳಿ ಹಬ್ಬಕ್ಕೆ ಹಸಿರು ಪಟಾಕಿ ಹೊರತುಪಡಿಸಿ ಉಳಿದೆಲ್ಲ ಪಟಾಕಿಗಳ ಮಾರಾಟಕ್ಕೆ ನಿರ್ಬಂಧ ಹೇರಲಾಗಿದೆ. ಇದೇ ಕಾರಣಕ್ಕೆ ರಾಮಮಂದಿರ ಮೈದಾನದಲ್ಲಿ ಹಾಕಲಾಗಿರುವ ಪಟಾಕಿಗಳ ಮಳಿಗೆಗಳಿಗೆ ರಾಜಾಜಿನಗರ ಠಾಣೆಯ ಪೊಲೀಸರು, ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಹಸಿರು ಪಟಾಕಿಗಳನ್ನು ಮಾರಾಟ ಮಾಡಲು ಮಳಿಗೆ ಮಾಲೀಕರಿಗೆ ಪರವಾನಗಿ ನೀಡಲಾಗಿದೆ. ಪೊಲೀಸರು ಹಾಗೂ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು, ಖುದ್ದು ಮಳಿಗೆಗಳಿಗೆ ಭೇಟಿ ನೀಡಿ ಪರಿಶೀಲನೆಯನ್ನೂ ಮಾಡಿದ್ದಾರೆ.

‘ಹೆಚ್ಚು ಹೊಗೆ ಹಾಗೂ ಶಬ್ದ ಬರುವ ಪಟಾಕಿಗಳನ್ನು ಕೆಲ ಮಳಿಗೆಗಳಲ್ಲಿ ಮಾರಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಬಂದಿತ್ತು. ಹೀಗಾಗಿ, ಪೊಲೀಸರ ತಂಡಗಳು ಮಳಿಗೆಗಳಿಗೆ ತೆರಳಿ ಪರಿಶೀಲನೆ ನಡೆಸಿದರು. ನಿಯಮ ಉಲ್ಲಂಘಿಸಿದ್ದ ಕೆಲ ವ್ಯಾಪಾರಿಗಳಿಗೆ ದಂಡವನ್ನೂ ವಿಧಿಸಲಾಗಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು