ಬೆಂಗಳೂರು: ‘ಒಂದು ತತ್ವ ಸಿದ್ಧಾಂತವನ್ನು ಪ್ರತಿಪಾದಿಸುವ ಮೂಲಕ ಸುಳ್ಳನ್ನು ಸತ್ಯವೆಂದು ಬಿಂಬಿಸುವ ಪಕ್ಷಗಳು ಅಧಿಕಾರಕ್ಕೆ ಬಂದಿವೆ. ಕೆಲ ಪಕ್ಷಗಳು ಸಮಾಜದ ಸಾಮರಸ್ಯವನ್ನು ಹಾಳು ಮಾಡುತ್ತಿವೆ’ ಎಂದು ವಿಧಾನ ಪರಿಷತ್ ಸದಸ್ಯ ಕೆ. ಶಿವಕುಮಾರ್ ತಿಳಿಸಿದರು.

ಕರ್ನಾಟಕ ಮಾಧ್ಯಮ ಅಕಾಡೆಮಿ ಶನಿವಾರ ಆಯೋಜಸಿದ್ದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಪತ್ರಿಕಾ ಸಂಪಾದಕರಿಗೆ ‘ಪತ್ರಿಕೆಗಳಲ್ಲಿ ಎಐ ಬಳಕೆ ಮತ್ತು ಡಿಜಿಟಲ್ ಸವಾಲುಗಳ ನಿರ್ವಹಣೆ’ ಕುರಿತು ತರಬೇತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಇಂತಹ ಪರಿಸ್ಥಿತಿಯಲ್ಲಿ ದಲಿತ ಸಂಪಾದಕರು ಹಾಗೂ ಪತ್ರಕರ್ತರು ನೈಜ ವರದಿಗಳನ್ನು ಎಲ್ಲರಿಗೂ ತಲುಪಿಸುವ ಕೆಲಸ ಮಾಡಬೇಕು. ಪ್ರಸ್ತುತ ರಾಜಕೀಯ, ಸಾಮಾಜಿಕ ಸ್ಥಿತಿಗತಿಗಳ ಕುರಿತು ಸಂಪಾದಕೀಯವನ್ನು ಕಡ್ಡಾಯವಾಗಿ ಬರೆಯಬೇಕು’ ಎಂದು ಸಲಹೆ ನೀಡಿದರು.

‘ಪತ್ರಿಕೆಗಳಲ್ಲಿ ಸಂವಿಧಾನದ ಕುರಿತು ಲೇಖನಗಳನ್ನು ಪ್ರಕಟಿಸಿ, ಅವುಗಳನ್ನು ಶಾಲಾ ಕಾಲೇಜಿನ ಮಕ್ಕಳಿಗೆ ತಲುಪಿಸುವ ಕೆಲಸ ಮಾಡಬೇಕು. ಜ. 26ರಿಂದ 2027ರ ಜ. 26ರವರೆಗೆ ಎರಡು ವರ್ಷಗಳ ಕಾಲ ಸಂವಿಧಾನ ಪೀಠಿಕೆಯಿಂದ ಹಿಡಿದು ಪ್ರಮುಖ ಅಂಶಗಳನ್ನು ಪ್ರಕಟಿಸಿ, ಮಾಧ್ಯಮ ಅಕಾಡೆಮಿಗೆ ತಂದು ಕೊಡಬೇಕು’ ಎಂದರು.

ಅಕಾಡೆಮಿ ಅಧ್ಯಕ್ಷೆ ಆಯಿಷಾ ಖಾನುಂ, ಪತ್ರಕರ್ತ ಶಿವಾಜಿ ಗಣೇಶನ್, ಕರ್ನಾಟಕ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಪತ್ರಿಕಾ ಸಂಪಾದಕರ ಸಂಘದ ಅಧ್ಯಕ್ಷ ಚೆಲುವರಾಜು, ಕಾರ್ಯದರ್ಶಿ ಸಹನಾ ಎಂ. ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.