ಬೆಂಗಳೂರು: ಆರು ವರ್ಷಗಳಿಂದ ಒಂದೂ ಚುನಾಣೆಯಲ್ಲಿ ಸ್ಪರ್ಧಿಸದ ಹಾಗೂ ರಾಜಕೀಯ ಪಕ್ಷಗಳ ಕಚೇರಿಯನ್ನು ಗುರುತಿಸಲು ಸಾಧ್ಯವಾಗದ ಕಾರಣ ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ 10 ರಾಜಕೀಯ ಪಕ್ಷಗಳ ನೋಂದಣಿಯನ್ನು ರದ್ದುಪಡಿಸುವ ಸಂಬಂಧ ಜಿಲ್ಲಾ ಚುನಾವಣಾಧಿಕಾರಿ ಎಂ. ಮಹೇಶ್ವರ್ ರಾವ್ ಅವರು ನೋಟಿಸ್ ಜಾರಿ ಮಾಡಿದ್ದಾರೆ.

‘ಸಂವಿಧಾನದ 324ನೇ ವಿಧಿಯಡಿ ಜನ ಪ್ರಾತಿನಿಧ್ಯ ಕಾಯ್ದೆ 1951 ಸೆಕ್ಷನ್ 29ಎ ಅಡಿ ಇಂತಹ ಪಕ್ಷಗಳ ನೋಂದಣಿಯನ್ನು ಏಕೆ ರದ್ದು ಮಾಡಬಾರದು ಎಂದು ಕಾರಣ ಕೇಳಿ ನೋಟೀಸ್ ಜಾರಿ ಮಾಡಲಾಗಿದೆ. ಇದಕ್ಕೆ ಸಂಬಂಧಪಟ್ಟ ಪಕ್ಷಗಳ ಪ್ರತಿನಿಧಿಗಳು 10 ದಿನದಲ್ಲಿ ವಿಚಾರಣೆಗೆ ಖುದ್ದಾಗಿ ಹಾಜರಾಗಬೇಕು’ ಎಂದು ನೋಟಿಸ್ನಲ್ಲಿ ತಿಳಿಸಲಾಗಿದೆ.

‘2019ರಿಂದ ಒಂದೂ ಚುನಾವಣೆಯಲ್ಲಿ ಸ್ಪರ್ಧಿಸದ ಜಿಲ್ಲಾ ವ್ಯಾಪ್ತಿಯಲ್ಲಿರುವ 10 ನೋಂದಾಯಿತ ಮಾನ್ಯತೆ ಪಡೆಯದ ರಾಜಕೀಯ ಪಕ್ಷಗಳ ನೋಂದಣಿಯನ್ನು ರದ್ದುಪಡಿಸುವ ಪ್ರಕ್ರಿಯೆಯನ್ನು ಕೇಂದ್ರ ಚುನಾವಣಾ ಆಯೋಗದ ಆರಂಭಿಸಿದೆ. ಹೀಗಾಗಿ, ರಾಜ್ಯದ ಮುಖ್ಯ ಚುನಾವಣಾಧಿಕಾರಿ ಸೂಚನೆ ಮೇರೆಗೆ, ನಗರ ಜಿಲ್ಲೆಯಲ್ಲಿ ಪ್ರಕ್ರಿಯೆ ಆರಂಭವಾಗಿದೆ’ ಎಂದು ಮಹೇಶ್ವರ್ ರಾವ್ ತಿಳಿಸಿದರು.

ಮಾನ್ಯತೆ ಪಡೆಯದ ರಾಜಕೀಯ ಪಕ್ಷಗಳು: ಅಂಬೇಡ್ಕರ್ ಜನತಾ ಪಕ್ಷ, ಭಾರತೀಯ ಡಾ. ಬಿ.ಆರ್ ಅಂಬೇಡ್ಕರ್ ಜನತಾ ಪಕ್ಷ, ಭಾರತೀಯ ಪ್ರಜಾ ಪಕ್ಷ, ಕಲ್ಯಾಣ ಕ್ರಾಂತಿ ಪಕ್ಷ, ಕರ್ನಾಟಕ ಪ್ರಜಾ ವಿಕಾಸ ಪಕ್ಷ, ಮಹಿಳಾ ಪ್ರಧಾನ ಪಕ್ಷ, ನಮ್ಮ ಕಾಂಗ್ರೆಸ್, ಪ್ರಜಾ ರೈತ ರಾಜ್ಯ ಪಕ್ಷ, ರಕ್ಷಕ ಸೇನಾ, ಸಮಾಜವಾದಿ ಜನತಾ ಪಕ್ಷ (ಕರ್ನಾಟಕ).

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.