ಗುರುವಾರ, 18 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ರಾಜ್ಯದಲ್ಲಿ ಬಿಎಸ್‌ಪಿ ಪುನಶ್ಚೇತನಕ್ಕೆ ಸಂಕಲ್ಪ

Published 2 ಜುಲೈ 2024, 19:43 IST
Last Updated 2 ಜುಲೈ 2024, 19:43 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಬಿಎಸ್‌ಪಿಯನ್ನು ತಳಮಟ್ಟದಿಂದ ಸದೃಢಗೊಳಿಸುವ ಸಂಬಂಧ ರಾಷ್ಟ್ರೀಯ ಅಧ್ಯಕ್ಷರ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ತೀರ್ಮಾನಿಸಲಾಯಿತು ಎಂದು ಪಕ್ಷದ ರಾಜ್ಯ ಘಟಕವು ತಿಳಿಸಿದೆ.

ಪಕ್ಷದ ಕಚೇರಿಯಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಈ ವಿಚಾರಗಳನ್ನು ಚರ್ಚಿಸಲಾಯಿತು. ವಿಧಾನಸಭೆ ಮತ್ತು ಲೋಕಸಭಾ ಚುನಾವಣೆಗಳಲ್ಲಿ ಪಕ್ಷಕ್ಕೆ ನಿರೀಕ್ಷಿಸಿದ್ದಷ್ಟು ಫಲಿತಾಂಶ ಬಂದಿಲ್ಲ. ಅದಕ್ಕೆ ಕಾರಣಗಳೇನು ಎಂಬುದರ ಬಗ್ಗೆ ಮತ್ತು ಪಕ್ಷವನ್ನು ಬಲಿಷ್ಠಗೊಳಿಸುವ ಬಗ್ಗೆ ಚರ್ಚಿಸಲಾಯಿತು ಎಂದು ಪಕ್ಷದ ಪ್ರಕಟಣೆ ತಿಳಿಸಿದೆ.

ಸಭೆಯಲ್ಲಿ ರಾಜ್ಯ ಉಸ್ತುವಾರಿ ಡಾ.ಅಶೋಕ್ ಸಿದ್ದಾರ್ಥ, ರಾಜ್ಯ ಸಂಯೋಜಕರುಗಳಾದ ನಿತಿನ್ ಸಿಂಗ್, ಎಂ.ಗೋಪಿನಾಥ್, ಎಂ. ಕೃಷ್ಣಮೂರ್ತಿ, ರಾಜ್ಯ ಅಧ್ಯಕ್ಷರಾದ ಮಾರಸಂದ್ರ ಮುನಿಯಪ್ಪ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT