ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ ವಿಚಾರದಲ್ಲಿ ರಾಜಕಾರಣ ಸಲ್ಲದು: ಸಚಿವ ಬಸವರಾಜ ಬೊಮ್ಮಾಯಿ

Last Updated 20 ಏಪ್ರಿಲ್ 2021, 10:52 IST
ಅಕ್ಷರ ಗಾತ್ರ

ಬೆಂಗಳೂರು: ಕೋವಿಡ್‌ ವಿಚಾರದಲ್ಲಿ ರಾಜಕಾರಣ ಮಾಡುತ್ತಾ ಕೂರುವುದು ಸರಿಯಲ್ಲ. ಇಂತಹ ಸಂಕಷ್ಟದಲ್ಲಿ ಎಲ್ಲರೂ ಒಗ್ಗೂಡಿ ಕೋವಿಡ್‌ ನಿಯಂತ್ರಿಸುವ ಅಗತ್ಯವಿದೆ ಎಂದು ಗೃಹ ಮತ್ತು ಕಾನೂನು ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಎಲ್ಲ ವಿಚಾರದಲ್ಲೂ ದೋಷಗಳನ್ನು ಎತ್ತಿ ಹಿಡಿದು ರಾಜಕಾರಣ ಮಾಡುತ್ತಾ ಕೂರುವುದು ಎಷ್ಟು ಸರಿ. ಪ್ರಧಾನಿ ಮೋದಿಯವರು ಎಲ್ಲ ರಾಜ್ಯಗಳ ಆಡಳಿತ ಪಕ್ಷ ಮತ್ತು ವಿರೋಧಪಕ್ಷಗಳು ರಾಜ್ಯಪಾಲರ ನೇತೃತ್ವದಲ್ಲಿ ಸಭೆ ನಡೆಸಿ ಕೋವಿಡ್ ನಿಯಂತ್ರಣಕ್ಕೆ ಮುಂದಾಗಬೇಕು ಎಂದು ಸಲಹೆ ನೀಡಿದ್ದರು. ಆ ಪ್ರಕಾರ ಸಭೆ ಕರೆಯಲಾಗಿದೆ ಎಂದರು.

ರಾಜ್ಯಪಾಲರು ಸರ್ವಪಕ್ಷಗಳ ಸಭೆಯ ನೇತೃತ್ವ ವಹಿಸಿದರೆ ತಪ್ಪೇನು? ರಾಜಸ್ಥಾನದಲ್ಲಿ ಕಾಂಗ್ರೆಸ್‌ ಸರ್ಕಾರ ಇದೆ. ಅಲ್ಲಿ ರಾಜ್ಯಪಾಲರ ನೇತೃತ್ವದಲ್ಲಿ ಸಭೆ ನಡೆಸಿದರೆ, ರಾಜ್ಯಪಾಲರ ಆಡಳಿತ ಹೇರಿಕೆ ಆಗಿದೆ ಎಂದು ಅರ್ಥವೇ ಎಂದು ಪ್ರಶ್ನಿಸಿದ ಅವರು, ಎಲ್ಲ ವಿಚಾರಗಳಲ್ಲೂ ರಾಜಕೀಯ ಮಾಡುತ್ತಾ, ಮೊಸರಲ್ಲಿ ಕಲ್ಲು ಹುಡುಕಬಾರದು ಎಂದು ಬೊಮ್ಮಾಯಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT