ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಕಳಪೆ ಆಹಾರ: ಕೆಎಸ್‌ಸಿಎ ವಿರುದ್ಧ ಎಫ್‌ಐಆರ್‌

Published 15 ಮೇ 2024, 16:14 IST
Last Updated 15 ಮೇ 2024, 16:14 IST
ಅಕ್ಷರ ಗಾತ್ರ

ಬೆಂಗಳೂರು: ಐಪಿಎಲ್‌ನ ಪಂದ್ಯ ವೀಕ್ಷಣೆಗೆ ಬಂದಿದ್ದ ವೇಳೆ ಕಳಪೆ ಆಹಾರ ವಿತರಣೆ ಮಾಡಲಾಗಿದೆ ಎಂದು ಆರೋಪಿಸಿ ಯುವಕ ದೂರು ನೀಡಿದ್ದು, ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ಆಡಳಿತ ಮಂಡಳಿ ಹಾಗೂ ಕ್ಯಾಂಟೀನ್‌ ವ್ಯವಸ್ಥಾಪಕರ ವಿರುದ್ಧ ಕಬ್ಬನ್‌ಪಾರ್ಕ್‌ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಮೇ 12ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಡೆಲ್ಲಿ ಕ್ಯಾಪಿಟಲ್ಸ್‌ ನಡುವೆ ನಡೆದ ಕ್ರಿಕೆಟ್‌ ಪಂದ್ಯ ವೀಕ್ಷಿಸಲು ಚೈತನ್ಯ ಅವರು ಬಂದಿದ್ದರು. ಪಂದ್ಯ ನಡುವೆ ಕ್ಯಾಂಟೀನ್‌ನಲ್ಲಿ ಊಟ ಸೇವಿಸಿದ್ದರು. ಊಟ ಸೇವಿಸಿದ ಕೆಲವೇ ಕ್ಷಣಗಳಲ್ಲಿ ಅವರಿಗೆ ಹೊಟ್ಟೆ ನೋವು ಕಾಣಿಸಿಕೊಂಡಿತ್ತು. ಬಳಿಕ ಅವರು ಕುಸಿದು ಬಿದ್ದಿದ್ದರು. ಸಿಬ್ಬಂದಿ ನೆರವಿನಿಂದ ಆಂಬುಲೆನ್ಸ್‌ ಪ್ರಾಥಮಿಕ ಚಿಕಿತ್ಸೆ ನೀಡಲಾಗಿತ್ತು‌. ಬಳಿಕ ಖಾಸಗಿ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತು. ಚೈತನ್ಯ ಅವರನ್ನು ಪರೀಕ್ಷಿಸಿದ್ದ ವೈದ್ಯರು ಫುಡ್‌ ಪಾಯಿಸನ್‌ ಆಗಿದೆ ಎಂದು ಹೇಳಿದ್ದರು.

ಆರೋಗ್ಯ ಹದಗೆಡಲು ಕ್ಯಾಂಟೀನ್​ನಲ್ಲಿ ನೀಡಿದ ಆಹಾರವೇ ಕಾರಣ. ಹೀಗಾಗಿ ಕೆಎಸ್​ಸಿಎ ಆಡಳಿತ ಮಂಡಳಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದರು.  

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT