ಶುಕ್ರವಾರ, 20 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಪಿಒಪಿ ಮೂರ್ತಿ: ಕ್ರಿಮಿನಲ್‌ ಪ್ರಕರಣ ದಾಖಲು

ಪರಸರಸ್ನೇಹಿತ ಗಣೇಶ ಮೂರ್ತಿಗಳನ್ನು ಪೂಜಿಸಲು ಬಿಬಿಎಂಪಿ ಮನವಿ
Published : 31 ಆಗಸ್ಟ್ 2024, 21:30 IST
Last Updated : 31 ಆಗಸ್ಟ್ 2024, 21:30 IST
ಫಾಲೋ ಮಾಡಿ
Comments

ಬೆಂಗಳೂರು: ಪಿಒಪಿ ವಸ್ತುಗಳನ್ನು ಬಳಸಿ ಗಣೇಶ ಮೂರ್ತಿಗಳನ್ನು ತಯಾರಿಸಿದವರ ಮೇಲೆ ಕ್ರಿಮಿನಲ್‌ ಪ್ರಕರಣ ದಾಖಲಿಸಲಾಗುತ್ತಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಪುನರುಚ್ಚರಿಸಿದ್ದಾರೆ.

2015ರ ಫೆಬ್ರುವರಿ 27ರಲ್ಲಿ ಬಿಬಿಎಂಪಿ ಕೌನ್ಸಿಲ್‌ನಲ್ಲಿ ತೀರ್ಮಾನವಾದಂತೆ ಪರಿಸರಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕು ಎಂದು ಶನಿವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಗಣೇಶ ಮೂರ್ತಿಯ ತಯಾರಿಕೆಗಾಗಿ ಬಳಸುವ ರಾಸಾಯನಿಕ ಬಣ್ಣಗಳು, ಥರ್ಮಾಕೋಲ್ ಹಾಗೂ ಪ್ಲಾಸ್ಟರ್ ಆಫ್ ಪ್ಯಾರೀಸ್‌(ಪಿಓಪಿ) ಬಳಕೆಯನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ಈ ರೀತಿಯ ವಸ್ತುಗಳನ್ನು ಬಳಸಿ ತಯಾರಿಕೆಯಾಗುವ ಮೂರ್ತಿಗಳನ್ನು ವಶಪಡಿಸಿಕೊಂಡು ನಿಯಾಮಾನುಸಾರ ವಿಲೇವಾರಿ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.

ಸಾರ್ವಜನಿಕವಾಗಿ ಮೂರ್ತಿಗಳನ್ನು ಪ್ರತಿಷ್ಠಾಪಿಸಲು ಅನುಮತಿಗಾಗಿ ಉಪ ವಿಭಾಗದ ಮಟ್ಟದಲ್ಲಿ ನೋಡಲ್ ಅಧಿಕಾರಿಗಳಾಗಿ ನೇಮಿಸಲಾಗಿದೆ. ನೋಡಲ್ ಅಧಿಕಾರಿಗಳು ಪೊಲೀಸ್, ಬೆಸ್ಕಾಂ, ಅಗ್ನಿಶಾಮಕ ಹಾಗೂ ಸಂಬಂಧಪಟ್ಟ ಇಲಾಖೆಗಳ ಅಭಿಪ್ರಾಯ ಪಡೆದು ಏಕಗವಾಕ್ಷಿಯಲ್ಲಿ ತ್ವರಿತವಾಗಿ ಅನುಮತಿ ನೀಡಲಿದ್ಧಾರೆ ಎಂದಿದ್ದಾರೆ.

ಸಾರ್ವಜನಿಕರು ತಮ್ಮ ಮನೆಗಳಲ್ಲಿ ಮೂರ್ತಿಗಳನ್ನು ಬಕೆಟ್‌ಗಳಲ್ಲಿ ವಿಸರ್ಜನೆಗೊಳಿಸಿ, ಮಣ್ಣನ್ನು ಕೈತೋಟಗಳಿಗೆ, ಹೂವಿನ ಕುಂಡಗಳಿಗೆ ಬಳಸಬೇಕು. ದೊಡ್ಡ ಗಾತ್ರದ ಮೂರ್ತಿಗಳ ವಿಸರ್ಜನೆಗೆ ಪಾಲಿಕೆಯ ವ್ಯಾಪ್ತಿಯ ವಾರ್ಡ್‌ಗಳಲ್ಲಿ ವಿಸರ್ಜನೆ ಸ್ಥಳಗಳನ್ನು ನಿರ್ಮಿಸಲಾಗುತ್ತದೆ. ಕೆರೆ/ಕಲ್ಯಾಣಿಗಳಲ್ಲಿ 'ಗಣೇಶ ಮೂರ್ತಿ ವಿಸರ್ಜನೆಯಿಂದ ಉಂಟಾಗುವ ಮಾಲಿನ್ಯವನ್ನು ತಡೆಗಟ್ಟಲು ಸದರಿ ಸ್ಥಳಗಳ ಸಮೀಪದಲ್ಲಿ ತಾತ್ಕಾಲಿಕ ವಿಸರ್ಜನೆ ಸ್ಥಳಗಳನ್ನು ನಿರ್ಮಿಸಲಾಗುತ್ತದೆ ಎಂದು ತಿಳಿಸಿದ್ದಾರೆ.

ಪರಿಸರ ಸ್ನೇಹಿ ಗಣೇಶ ಆಚರಣೆಯ ನಿಮಿತ್ತ ವಲಯಕ್ಕೆ ಒಬ್ಬರನ್ನು ಮೇಲುಸ್ತುವಾರಿ ಅಧಿಕಾರಿಯನ್ನಾಗಿ ನೇಮಿಸಬೇಕು. ಗಣೇಶ ವಿಸರ್ಜನೆಗೆ ಸಂಬಂಧಿಸಿದಂತೆ ವಾರ್ಡಿಗೆ ಒಬ್ಬರಂತೆ ನೋಡಲ್ ಅಧಿಕಾರಿಯನ್ನು ನೇಮಿಸಬೇಕು. ಪ್ಲಾಸ್ಟಿಕ್ ಮಾರಾಟ ಮತ್ತು ಬಳಕೆ ಕಂಡುಬಂದಲ್ಲಿ ನಿಯಮಾನುಸಾರ ದಂಡ ವಿಧಿಸಿ ಕ್ರಮಕೈಗೊಳ್ಳಬೇಕು ಎಂದು ವಲಯ ಆಯುಕ್ತರಿಗೆ ಸೂಚಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT