ಏಪ್ರಿಲ್ 13ರಿಂದ ಏಪ್ರಿಲ್ 18ರವರೆಗೆ ಮನೆಯಿಂದಲೇ ಗೌಪ್ಯ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ. ಇಬ್ಬರು ಮತಗಟ್ಟೆ ಅಧಿಕಾರಿಗಳು, ಭದ್ರತಾ ಸಿಬ್ಬಂದಿ, ವಿಡಿಯೊಗ್ರಾಫರ್ ಒಳಗೊಂಡಿರುವ ಮತಗಟ್ಟೆ ತಂಡವು ಮತದಾರರ ಮನೆಗೆ ತೆರಳಿ, ಮತದಾನದ ಗುರುತಿನ ಚೀಟಿ ಪರಿಶೀಲಿಸುತ್ತದೆ. ಬಳಿಕ ಗೌಪ್ಯ ಮತದಾನಕ್ಕಾಗಿ ಅಂಚೆ ಮತಪತ್ರದಲ್ಲಿ ಮತ ಚಲಾಯಿಸಲು ಅವಕಾಶ ಕಲ್ಪಿಸಲಾಗುತ್ತದೆ. ಈ ಎಲ್ಲಾ ಪ್ರಕ್ರಿಯೆಯನ್ನು ವಿಡಿಯೊಗ್ರಫಿ ಮಾಡಲಾಗುತ್ತದೆ.