ಬೆಂಗಳೂರು: 2019– 2020ನೇ ಸಾಲಿನ ಎಸ್ಎಸ್‌ಎಲ್‌ಸಿ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ ಸೋಮವಾರದಿಂದ (ಜುಲೈ) ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಆರಂಭವಾಗಲಿದೆ.

ಆದರೆ, ಲಾಕ್‌ಡೌನ್ ಘೋಷಿಸಿರುವ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮೌಲ್ಯಮಾಪನ ಕಾರ್ಯವನ್ನು ಮುಂದೂಡಲಾಗಿದೆ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ಈ ಎರಡು ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ನಿಗದಿಯಂತೆ ಮೌಲ್ಯಮಾಪನ ಕಾರ್ಯ ನಡೆಯಲಿದೆ. ಈ ಎರಡು ಜಿಲ್ಲೆಗಳಲ್ಲಿ ಜುಲೈ 14ರಿಂದ 22ರವರೆಗೆ ಲಾಕ್‌ಡೌನ್ ಘೋಷಿಸಲಾಗಿದೆ. ಹೀಗಾಗಿ, ಮೌಲ್ಯಮಾಪನ ದಿನಾಂಕವನ್ನು ಮುಂದಿನ ದಿನಗಳಲ್ಲಿ ನಿರ್ಧರಿಸಲಾಗುವುದು’ ಎಂದೂ ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.