ಗುರುವಾರ, 12 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕುಕ್ಕುಟೋದ್ಯಮ: ಅಮೆರಿಕದ ಸಂಸ್ಥೆಗಳೊಂದಿಗೆ ಒ‍ಪ್ಪಂದ

Published 25 ಆಗಸ್ಟ್ 2024, 15:18 IST
Last Updated 25 ಆಗಸ್ಟ್ 2024, 15:18 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ವೇಗವಾಗಿ ಬೆಳೆಯುತ್ತಿರುವ ಕೋಳಿ ಸಾಕಾಣಿಕೆ ಉದ್ಯಮದಲ್ಲಿ ಉದ್ಯೋಗ ಸೃಷ್ಟಿ ಹೆಚ್ಚಿಸಲು, ಪೌಷ್ಟಿಕ ಆಹಾರ ಪೂರೈಸುವ ನಿಟ್ಟಿನಲ್ಲಿ ಉದ್ಯೋಗಿಗಳಿಗೆ ತರಬೇತಿ ಮತ್ತು ಸಾಮರ್ಥ್ಯ ವರ್ಧನೆಯನ್ನು ವೇಗಗೊಳಿಸಲು ಕರ್ನಾಟಕ ಕೋಳಿ ಸಾಕಾಣಿಕೆದಾರರ ಸಂಘವು ಅಮೆರಿಕದ ಎರಡು ಸಂಸ್ಥೆಗಳೊಂದಿಗೆ ಒಡಂಬಡಿಕೆ ಮಾಡಿಕೊಂಡಿದೆ.

ಯುಎಸ್ಎಸ್‌ಸಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿಮ್ ಸುಟರ್ ಮತ್ತು ಅಮೆರಿಕದ ಸೋಯಾ ಉತ್ಕೃಷ್ಟತಾ ಕೇಂದ್ರಗಳೊಂದಿಗೆ ಸಹಯೋಗ ಹೊಂದುವ ಉದ್ದೇಶದಿಂದ ಕರ್ನಾಟಕ ಕೋಳಿ ರೈತರ ಮತ್ತು ತಳಿಗಾರರ ಸಂಘದ ಅಧ್ಯಕ್ಷ ನವೀನ್ ಪಶುಪರ್ತಿ ಒಪ್ಪಂದಕ್ಕೆ ಸಹಿ ಮಾಡಿದರು.

ಕೌಶಲ ಭಾರತ ಯೋಜನೆಯಡಿ ಭಾರತದ ಕೋಳಿ ಉದ್ಯಮದಲ್ಲಿ ಕ್ಷಿಪ್ರ ಪ್ರಗತಿ ಸಾಧಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ. ಈ ಒಡಂಬಡಿಕೆಯಿಂದಾಗಿ ಕುಕ್ಕುಟೋದ್ಯಮದ ಬೆಳವಣಿಗೆಗೆ ಸಹಕಾರಿಯಾಗಲಿದೆ. ಕೋಳಿ ಮತ್ತು ಕೋಳಿ ತಳಿಗಳಿಗೆ ಸಂಬಂಧಿಸಿದಂತೆ ಸಹಭಾಗಿತ್ವದಲ್ಲಿ ಕೆಲಸ ಮಾಡಲು ಕರ್ನಾಟಕ ಸರ್ಕಾರ ಮತ್ತು ಅಮೆರಿಕದ ಒಕ್ಕೂಟ ಸರ್ಕಾರದ ಸಂಸ್ಥೆಗಳು ಒಡಂಬಡಿಕೆಗೆ ಸಹಿ ಹಾಕಿವೆ ಎಂದು ಕೋಮರ್ಲ ನಂದು ಗ್ರೂಪ್‌ ವ್ಯವಸ್ಥಾಪಕ ನಿರ್ದೇಶಕ ಮತ್ತು ನಂದುಸ್‌ನ ನಿರ್ದೇಶಕರೂ ಆಗಿರುವ ಪಶುಪರ್ತಿ ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT