ಭಾನುವಾರ, 14 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಂಗಳೂರಿನ ಈ ಪ್ರದೇಶಗಳಲ್ಲಿ ಜೂನ್‌ 24ರಂದು ವಿದ್ಯುತ್ ವ್ಯತ್ಯಯ

Published 21 ಜೂನ್ 2024, 15:31 IST
Last Updated 21 ಜೂನ್ 2024, 15:31 IST
ಅಕ್ಷರ ಗಾತ್ರ

ಬೆಂಗಳೂರು: ಹೆಣ್ಣೂರು ವಿದ್ಯುತ್‌ ಉಪಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾರ್ಯಗಳು ನಡೆಯುವ ಕಾರಣ, ಈ ಕೆಳಕಂಡ ಸ್ಥಳಗಳಲ್ಲಿ ಸೋಮವಾರ (ಜೂನ್‌ 24) ಬೆಳಿಗ್ಗೆ 10.30ರಿಂದ ಮಧ್ಯಾಹ್ನ 4ರ ವರೆಗೆ ವಿದ್ಯುತ್‌ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು: ಹೆಣ್ಣೂರು ಬಂಡೆ, ಸಮುದ್ರಿಕಾ ಎನ್‌ಕ್ಲೇವ್, ಗ್ರೇಸ್ ಗಾರ್ಡನ್, ಕ್ರಿಸ್ಟ್ ಜಯಂತಿ ಕಾಲೇಜು, ಕೆ.ನಾರಾಯಣಪುರ, ಬಿಳಿಶಿವಾಲೆ, ಆಶಾ ಟೌನ್‌ಶಿಪ್, ಐಶ್ವರ್ಯ ಲೇಔಟ್, ಮಾರುತಿ ಟೌನ್‌ಶಿಪ್, ನಗರಗಿರಿ ಟೌನ್‌ಶಿಪ್, ಕೆ.ನಾರಾಯಣಪುರ ಕ್ರಾಸ್, ಬಿ.ಡಿ.ಎಸ್. ಗಾರ್ಡನ್, ಕೊತನೂರು, ಪಟೇಲ್ ರಾಮಯ್ಯ ಲೇಔಟ್, ಅಂಜನಪ್ಪ ಲೇಔಟ್, ಸಿ.ಎಸ್.ಐ ಗೇಟ್, ಬೈರತಿ ಕ್ರಾಸ್, ಬೈರತಿ ಹಳ್ಳಿ, ಎವರ್ ಗ್ರೀನ್ ಲೇಔಟ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಕನಕ ಶ್ರೀ ಲೇಔಟ್, ಗೆದ್ದಲಹಳ್ಳಿ, ಬ್ಲೆಸ್ಸಿಂಗ್ ಗಾರ್ಡನ್, ಮಂತ್ರಿ ಅಪಾರ್ಟ್‌ಮೆಂಟ್, ಹಿರೇಮಠ ಲೇಔಟ್, ಟ್ರಿನಿಟಿ ಫಾರ್ಚೂನ್, ಮೈಕಲ್ ಸ್ಕೂಲ್, ಬಿ.ಹೆಚ್.ಕೆ. ಇಂಡಸ್ಟ್ರೀಸ್, ಜಾನಕೀ ರಾಮ್ ಲೇಔಟ್, ವಡ್ಡರ ಪಾಳ್ಯ, ಅನುಗ್ರಹ ಲೇಔಟ್, ಕಾವೇರಿ ಲೇಔಟ್, ಆತ್ಮವಿದ್ಯಾನಗರ, ಬೈರತಿಹಳ್ಳಿ, ಕೆ.ಆರ್.ಸಿ, ದೊಡ್ಡಗುಬ್ಬಿ ಕ್ರಾಸ್, ಕುವೆಂಪು ಲೇಔಟ್, ಸಂಗಮ್ ಎನ್‌ಕ್ಲೇವ್, ಬೈರತಿ ಬಂಡೆ, ನಕ್ಷತ್ರ ಲೇಔಟ್, ತಿಮ್ಮೇಗೌಡ ಲೇಔಟ್, ಆಂದ್ರ ಕಾಲೋನಿ ಮಂಜುನಾಥ್ ನಗರ, ಹೊರಮಾವು ಬಿಬಿಎಂಪಿ, ಅಗರ ಗ್ರಾಮ, ಪಟಾಲಮ್ಮ ಟೆಂಪಲ್, ಎ.ಕೆ.ಆರ್ ಸ್ಕೂಲ್, ಹೊಸ ಮಿಲೇನಿಯಮ್ ಸ್ಕೂಲ್, ಲಕ್ಕಮ್ಮ ಲೇಔಟ್, ಪ್ರಕಾಶ್ ಗಾರ್ಡನ್, ಕ್ರಿಸ್ಟೆನ್‌ ಕಾಲೇಜು ರಸ್ತೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT