ಬೆಂಗಳೂರು: ಅಗ್ನಿಸುರಕ್ಷತಾ ಕ್ರಮಗಳನ್ನು ಪಾಲಿಸಲು ವಿಫಲವಾದ ಕಾರಣ, ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ನೀಡಿದ್ದ ವಿದ್ಯುತ್ ಸಂಪರ್ಕವನ್ನು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ (ಬೆಸ್ಕಾಂ) ಕಡಿತಗೊಳಿಸಿದೆ.

ವಿದ್ಯುತ್ ಸಂಪರ್ಕ ಕಡಿತಗೊಳಿಸುವಂತೆ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಮಹಾನಿರ್ದೇಶಕರು ಕಳೆದ ತಿಂಗಳು ಬೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚಿಸಿದ್ದರು. ಅದನ್ನು ಆಧರಿಸಿ ಈ ಕ್ರಮಕೈಗೊಳ್ಳಲಾಗಿದೆ.

ಮಹಾನಿರ್ದೇಶಕರ ಸೂಚನೆ ಮೇರೆಗೆ ಬೆಸ್ಕಾಂ, ಜೂನ್ 12ರಂದು ಚಿನ್ನಸ್ವಾಮಿ ಕ್ರೀಡಾಂಗಣ ನಿರ್ವಹಿಸುವ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್ಗೆ(ಕೆಎಸ್ಸಿಎ) ನೋಟಿಸ್ ಜಾರಿಗೊಳಿಸಿ, ಮೂರು ದಿನಗಳ ಕಾಲಾವಕಾಶವನ್ನೂ ನೀಡಿತ್ತು. ನಂತರ, ಬೆಸ್ಕಾಂ ಜೂನ್ 15ರಂದು ವಿದ್ಯುತ್ ಕಡಿತಗೊಳಿಸಿತ್ತು. ಈ ನಡುವೆ ಕೆಎಸ್ಸಿಎ 15 ದಿನ ಕಾಲಾವಕಾಶ ನೀಡುವಂತೆ ಬೆಸ್ಕಾಂಗೆ ಮನವಿ ಮಾಡಿತ್ತು ಎಂದು ಮೂಲಗಳು ತಿಳಿಸಿವೆ.

ಇದನ್ನು ಪರಿಗಣಿಸಿದ ಬೆಸ್ಕಾಂ, ಜೂನ್ 20ರಂದು ಪುನಃ ಕೆಎಸ್ಸಿಎಗೆ ನೋಟಿಸ್ ಜಾರಿಗೊಳಿಸಿ, ಏಳು ದಿನಗಳ ಕಾಲಾವಕಾಶ ನೀಡಿತ್ತು. ಆ ಗಡುವು ಜೂನ್ 27ಕ್ಕೆ ಮುಗಿದಿತ್ತು. ಕೆಎಸ್ಸಿಎ ಕಡೆಯಿಂದ ಕ್ರಮ ಕೈಗೊಂಡಿರುವ ಬಗ್ಗೆ ಪ್ರತಿಕ್ರಿಯೆ ಬಾರದ ಕಾರಣ, ಜೂನ್ 30ರಂದು ಕ್ರೀಡಾಂಗಣದ ವಿದ್ಯುತ್ ಸಂಪರ್ಕ ಕಡಿತಗೊಳಿಸಿರುವುದಾಗಿ ಬೆಸ್ಕಾಂ ಮೂಲಗಳು ತಿಳಿಸಿವೆ.

ಈ ಮಧ್ಯೆ ಬೆಸ್ಕಾಂ ನೀಡಿರುವ ನೋಟಿಸ್ ಪ್ರಶ್ನಿಸಿ ಕೆಎಸ್ಸಿಎ ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿತ್ತು. ಸೋಮವಾರ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಪೀಠ, ‘ಅಗ್ನಿ ಸುರಕ್ಷತೆಯ ಮುನ್ನೆಚ್ಚರಿಕೆ ಕ್ರಮಗಳನ್ನು ಅಳವಡಿಸಿಕೊಂಡಿಲ್ಲ ಎಂದು ಗೊತ್ತಿದ್ದರೂ ವಿದ್ಯುತ್ ಸಂಪರ್ಕ ಕೊಟ್ಟಿದ್ದು ಹೇಗೆ? ಸರ್ಕಾರವನ್ನು ಕೇಳದೇ ನಿಮ್ಮಷ್ಟಕ್ಕೆ ನೀವೇ ವಿದ್ಯುತ್ ಸಂಪರ್ಕ ಕೊಟ್ಟುಬಿಟ್ಟರೆ ನ್ಯಾಯಾಲಯ ಸುಮ್ಮನಿರುವುದಿಲ್ಲ’ ಎಂದು ಬೆಸ್ಕಾಂ ಅನ್ನು ತರಾಟೆಗೆ ತೆಗೆದುಕೊಂಡಿತು.‘ಈ ತಪ್ಪಿಗೆ ಬೆಸ್ಕಾಂ ಅನ್ನೇ ಸಂಪೂರ್ಣವಾಗಿ ಹೊಣೆ ಮಾಡಲಾಗುವುದು’ ಎಂದು ಕಟುವಾಗಿ ಎಚ್ಚರಿಸಿತು.

ಬೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕ, ಬೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಮಹಾ ನಿರ್ದೇಶಕರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿ, ವಿಚಾರಣೆಯನ್ನು ಜುಲೈ 15ಕ್ಕೆ ಮುಂದೂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.