ಬೆಂಗಳೂರಿನಲ್ಲಿ ವಿದ್ಯುತ್ ವ್ಯತ್ಯಯ ಇಂದು
ಬೆಂಗಳೂರು: ನಿರ್ವಹಣಾ ಕಾರ್ಯ ಕೈಗೆತ್ತಿಕೊಳ್ಳುತ್ತಿರುವುದರಿಂದ ನಗರದ ವಿವಿಧ ಪ್ರದೇಶಗಳಲ್ಲಿ ಸೆ. 4ರಂದು ಬೆಳಿಗ್ಗೆ 9ರಿಂದ ಸಂಜೆ 6ರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಹೇಳಿದೆ.
ಎನ್.ಎಸ್. ಬಡಾವಣೆ, ಸ್ವಾತಂತ್ರ್ಯ ಹೋರಾಟಗಾರರ ಬಡಾವಣೆ, ಕೆಂಪೇಗೌಡ ಬಡಾವಣೆ, ಕುರುಬರಹಳ್ಳಿ ಮುಖ್ಯರಸ್ತೆ, ಲಗ್ಗೆರೆ ಸೇತುವೆ ವರ್ತುಲ ರಸ್ತೆ, ಮುನೇಶ್ವರ ಬಡಾವಣೆ ಮತ್ತು ಸುತ್ತ–ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
ದೂರುಗಳಿಗೆ 1912 ಸಹಾಯವಾಣಿ ಸಂಖ್ಯೆ ಸಂಪರ್ಕಿಸಬಹುದು. ವಿದ್ಯುತ್ ವ್ಯತ್ಯಯದ ಕುರಿತು ಮೊದಲೇ ತಿಳಿದುಕೊಳ್ಳಲು www.bescom.org ವೆಬ್ಸೈಟ್ ನೋಡಬಹುದು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.