ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

3,673 ಪೌರಕಾರ್ಮಿಕರ ಸೇವೆ ಕಾಯಂ

Last Updated 24 ನವೆಂಬರ್ 2022, 4:06 IST
ಅಕ್ಷರ ಗಾತ್ರ

ಬೆಂಗಳೂರು: ಬಿಬಿಎಂಪಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ 3,673 ಪೌರಕಾರ್ಮಿಕರನ್ನು ನೇಮಕಾತಿ ಪ್ರಕ್ರಿಯೆ ಮೂಲಕ ಕಾಯಂಗೊಳಿಸಲು ರಾಜ್ಯ ಸರ್ಕಾರ ಬುಧವಾರ ಅಧಿಸೂಚನೆ ಹೊರಡಿಸಿದೆ.

ಸದ್ಯ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಈ ಕಾರ್ಮಿಕರನ್ನು ಕಾಯಂಗೊಳಿಸಿ ತಿಂಗಳಿಗೆ ₹17,000– ₹28,950 ವೇತನ ಶ್ರೇಣಿಗೆ ತರಲು ಸರ್ಕಾರ ಮುಂದಾಗಿದೆ.

ಒಟ್ಟಾರೆ 18 ಸಾವಿರ ಪೌರಕಾರ್ಮಿಕರ ಪೈಕಿ ಅನುಭವ ಆಧರಿಸಿ ಜೇಷ್ಠತಾ ಪಟ್ಟಿ ಸಿದ್ಧಪಡಿಸಲು ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅಧ್ಯಕ್ಷತೆಯಲ್ಲಿ ಸಮಿತಿ ರಚನೆಯಾಗಿತ್ತು. ಗರಿಷ್ಠ ವಯೋಮಿತಿಯನ್ನು 55 ವರ್ಷಗಳಿಗೆ ಮಿತಿಗೊಳಿಸಲಾಗಿದೆ. ಕನಿಷ್ಠ ಎರಡು ವರ್ಷ ಕೆಲಸ ಮಾಡಿದ್ದಕ್ಕೆ ಮತ್ತು ವೇತನ ಪಡೆದಿರುವುದಕ್ಕೆ ದಾಖಲೆಗಳನ್ನು ಕಾರ್ಮಿಕರು ಒದಗಿಸಬೇಕು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಸಾಮಾನ್ಯ ವರ್ಗ ಅಥವಾ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳು ಇಲ್ಲದಿದ್ದರೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳನ್ನು ಪರಿಗಣಿಸಲು ಅವಕಾಶ ಕಲ್ಪಿಸಿ ಷರತ್ತು ಸಡಿಲಿಸಲಾಗಿದೆ ಎಂದು ಅಧಿಸೂಚನೆಯಲ್ಲಿ ವಿವರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT