ಮಂಗಳವಾರ, ಅಕ್ಟೋಬರ್ 27, 2020
22 °C

ಮೂಲಸೌಕರ್ಯಕ್ಕೆ ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯ ಹೊರ ವಲಯಗಳಲ್ಲಿ ಲಕ್ಷಾಂತರ ಕಂದಾಯ ನಿವೇಶನಗಳಿದ್ದು, ಅವುಗಳಿಗೆ ಮೂಲಸೌಕರ್ಯ ಒದಗಿಸಲು ವಿಶೇಷ ಅನುದಾನ ಬಿಡುಗಡೆ ಮಾಡಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಕರ್ನಾಟಕ ರೆವಿನ್ಯೂ ನಿವೇಶನದಾರರ ಸಂಘದ ಅಧ್ಯಕ್ಷ ಆರ್. ಪ್ರಭಾಕರ್‌ ರೆಡ್ಡಿ ಮನವಿ ಮಾಡಿದರು.

ಮುಖ್ಯಮಂತ್ರಿ ಗೃಹ ಕಚೇರಿ ’ಕೃಷ್ಣಾ‘ದಲ್ಲಿ ಯಡಿಯೂರಪ್ಪ ಅವರನ್ನು ಗುರುವಾರ ಭೇಟಿ ಮಾಡಿ ಮನವಿ ಸಲ್ಲಿಸಿದ ಅವರು, ‘ಕಂದಾಯ ನಿವೇಶನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಬಡವರೇ ಸೂರು ನಿರ್ಮಿಸಿಕೊಂಡಿದ್ದಾರೆ. ಅವರು ಮೂಲ ಸೌಕರ್ಯಗಳಿಂದ ವಂಚಿತರಾಗಿದ್ದಾರೆ. ಶುದ್ಧ ಕುಡಿಯುವ ನೀರು, ಬೀದಿ ದೀಪ, ಒಳಚರಂಡಿ ವ್ಯವಸ್ಥೆ, ಸಂಪರ್ಕ ರಸ್ತೆ ಕಲ್ಪಿಸಿಕೊಡಬೇಕು’ ಎಂದು ಕೋರಿದರು.

‘ರೈತಪರ, ಕಾರ್ಮಿಕರ ಪರ ಕಾಳಜಿ ಇರುವ ಮುಖ್ಯಮಂತ್ರಿ ನಮ್ಮ ಮನವಿಗೆ ಸ್ಪಂದಿಸಿ ಹಲವು ಮಾಹಿತಿಗಳನ್ನು ಪಡೆದಿದ್ದಾರೆ. ಕಾನೂನಿನಡಿ ಪರಿಶೀಲಿಸಲು ಅಧಿಕಾರಿಗಳಿಗೆ ಸೂಚಿಸುವ ವಿಶ್ವಾಸವಿದೆ. ನಮ್ಮ ಸಂಘದ ಪ್ರಯತ್ನದಿಂದಾಗಿ ಸರ್ಕಾರಕ್ಕೂ ವರಮಾನ ಬರಲಿದೆ. ಬಡವರಿಗೂ ಒಳಿತಾಗಲಿದೆ’ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.