ಬೆಂಗಳೂರು: ಬಿಬಿಎಂಪಿ ಪ್ರಧಾನ ಎಂಜಿನಿಯರ್ ಆಗಿ ಬಿ.ಎಸ್. ಪ್ರಹ್ಲಾದ್ ಗುರುವಾರ ಅಧಿಕಾರ ವಹಿಸಿಕೊಂಡರು. ರಸ್ತೆ ಮೂಲಸೌಕರ್ಯ ವಿಭಾಗದ ಮುಖ್ಯ ಎಂಜಿನಿಯರ್ ಆಗಿದ್ದ ಪ್ರಹ್ಲಾದ್ ಅವರು 1993ರಲ್ಲಿ ಪಾಲಿಕೆಗೆ ಸೇರಿಕೊಂಡಿದ್ದರು. ಪ್ರಧಾನ ಎಂಜಿನಿಯರ್ ಹುದ್ದೆಯ ಜೊತೆಗೆ ರಸ್ತೆ ಮೂಲಸೌಕರ್ಯ ವಿಭಾಗದ ನೇರ ಮೇಲ್ವಿಚಾರಣೆ ಜವಾಬ್ದಾರಿಯನ್ನೂ ಪ್ರಹ್ಲಾದ್ ಅವರಿಗೆ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಇಲಾಖೆ ಅಧಿಸೂಚನೆ ಹೊರಡಿಸಿದೆ.