ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರ್ಕಾರಿ ಶಾಲೆಗಳಿಗೆ 2000 ಡೆಸ್ಕ್ ನೀಡಿದ ಜೋಶಿ

Last Updated 25 ಜನವರಿ 2021, 18:52 IST
ಅಕ್ಷರ ಗಾತ್ರ

ಬೆಂಗಳೂರು: ‘ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ತಾವು ಪ್ರತಿನಿಧಿಸುವ ಧಾರವಾಡ ಲೋಕಸಭಾ ಕ್ಷೇತ್ರದಲ್ಲಿನ ಸರ್ಕಾರಿ ಶಾಲೆಗಳಿಗೆ 2000 ಡೆಸ್ಕ್‌ಗಳನ್ನು ವಿತರಿಸಿದ್ದಾರೆ. ಎಲ್ಲ ಸಂಸದರು ಈ ಮಾದರಿಯನ್ನು ಅನುಸರಿಸಬೇಕು’ ಎಂದು ರಾಜ್ಯ ಸರ್ಕಾರದ ಶೈಕ್ಷಣಿಕ ಸಲಹೆಗಾರ ಪ್ರೊ.ಎಂ.ಆರ್. ದೊರೆಸ್ವಾಮಿ ಹೇಳಿದ್ದಾರೆ.

‘ಸರ್ಕಾರಿ ಶಾಲೆಗಳಲ್ಲಿನ ಎಲ್ಲ ತರಗತಿಗಳು ಶೀಘ್ರದಲ್ಲಿಯೇ ಮರುಪ್ರಾರಂಭವಾಗುವ ಈ ಹೊತ್ತಿನಲ್ಲಿ ಸಚಿವರ ನಡೆ ಸ್ವಾಗತಾರ್ಹ’ ಎಂದು ಅವರು ಹೇಳಿದ್ದಾರೆ.

‘ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಅಗತ್ಯವಿರುವ ಸರ್ಕಾರಿ ಶಾಲೆಗಳಲ್ಲಿ ಶೌಚಾಲಯ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವ ಕೆಲಸ ನಡೆಯುತ್ತಿದೆ. ಹಲವು ಜನಪ್ರತಿನಿಧಿಗಳು ಸರ್ಕಾರಿ ಶಾಲೆಗಳನ್ನು ದತ್ತು ತೆಗೆದುಕೊಳ್ಳುತ್ತಿದ್ದಾರೆ. ಜೋಶಿಯವರ ಈ ನಡೆಯಿಂದ ಸರ್ಕಾರಿ ಶಾಲೆಗಳಿಗೆ ಅನುಕೂಲವಾಗಲಿದೆ. ಮುಂದೆ, ಕಾರ್ಪೊರೇಟ್ ಕಂಪನಿಗಳ ಸಾಮಾಜಿಕ ಹೊಣೆಗಾರಿಕೆ ನಿಧಿಯನ್ನು ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಬಳಸುವ ನಿಟ್ಟಿನಲ್ಲಿ ಸರ್ಕಾರ ಕ್ರಮ ತೆಗೆದುಕೊಳ್ಳಬೇಕು’ ಎಂದು ಅವರು ಸಲಹೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT