ಬುಧವಾರ, ಏಪ್ರಿಲ್ 1, 2020
19 °C

ನಾಳೆ ‘ಪ್ರಜಾವಾಣಿ’ ಜನಸ್ಪಂದನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಸುಂಕೇನಹಳ್ಳಿ ವಾರ್ಡ್‌ನಲ್ಲಿರುವ ಕುಂದು ಕೊರತೆಗಳಿಗೆ ಪರಿಹಾರ ಕಂಡುಕೊಳ್ಳಲು ‘ಪ್ರಜಾವಾಣಿ’ ಪತ್ರಿಕೆ‌ಯ ಆಶ್ರಯ ದಲ್ಲಿ ‘ಜನಸ್ಪಂದನ–ಸಿಟಿಜನ್ಸ್‌ ಫಾರ್‌ ಚೇಂಜ್‌’ ಕಾರ್ಯಕ್ರಮ ಇದೇ
29ರಂದು ಬೆಳಿಗ್ಗೆ 10ಕ್ಕೆ ಬುಲ್‌ ಟೆಂಪಲ್‌ ರಸ್ತೆಯಲ್ಲಿರುವ ಎಸ್.ಬಿ.ಎನ್‌.ಹಾಲ್‌ನಲ್ಲಿ ನಡೆಯಲಿದೆ.

ಈ ಕಾರ್ಯಕ್ರಮದಲ್ಲಿ ಪಾಲಿಕೆ ಸದಸ್ಯ ರಮೇಶ್‌ ಡಿ.ಎನ್‌, ಬಿಬಿಎಂಪಿ, ಬೆಸ್ಕಾಂ, ಜಲಮಂಡಳಿ ಹಾಗೂ ಪೊಲೀಸ್‌ ಇಲಾಖೆಯ ಅಧಿಕಾರಿಗಳು ಭಾಗವಹಿಸಲಿದ್ದಾರೆ.

ಸಾರ್ವಜನಿಕರು ಕುಡಿಯುವ ನೀರು ಪೂರೈಕೆ ವ್ಯತ್ಯಯ, ಕಸ ವಿಲೇವಾರಿ ಸಮಸ್ಯೆ, ರಸ್ತೆ ಸುರಕ್ಷತೆ, ಉದ್ಯಾನ
ಗಳಿಗೆ ಸಂಬಂಧಿಸಿದ ಸಮಸ್ಯೆ ಸೇರಿದಂತೆ ಇನ್ನಿತರೆ ಕುಂದುಕೊರತೆಗಳ ಬಗ್ಗೆ ಪಾಲಿಕೆ ಸದಸ್ಯರು ಹಾಗೂ ಅಧಿಕಾರಿಗಳ ಜೊತೆ ಚರ್ಚಿಸಿ ಪರಿಹಾರ ಕಂಡುಕೊಳ್ಳಬಹುದು. ಈ ಮೂಲಕವಾರ್ಡ್‌ನ ಅಭಿವೃದ್ಧಿಯಲ್ಲಿ ನೀವು ಕೂಡ ಕೈ ಜೋಡಿಸಬಹುದು.

ವಾರ್ಡ್‌ನ ಕುಂದುಕೊರತೆಗಳ ಬಗ್ಗೆ ಗಮನ ಸೆಳೆಯಲು ಇಚ್ಛಿಸುವವರು 29ರಂದು ಬೆಳಿಗ್ಗೆ
9ರಿಂದ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾಗವಹಿಸುವವರು ಸ್ಥಳದಲ್ಲೇ ತಮ್ಮ ಹೆಸರು ನೋಂದಾಯಿಸಿಕೊಳ್ಳಬಹದು. ಬೆಳಿಗ್ಗೆ 10ರಿಂದ ಪ್ರಶ್ನೆಕೇಳಲು ಅವಕಾಶ ಕಲ್ಪಿಸ
ಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ: 9448528998

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು