ಬುಧವಾರ, ಜೂನ್ 3, 2020
27 °C

ಪ್ರಜಾವಾಣಿ ಕ್ವಿಜ್: ಬೆಂಗಳೂರಿನ ಕ್ರೈಸ್ಟ್ ಅಕಾಡೆಮಿ ಶಾಲೆ ಚಾಂಪಿಯನ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಅತ್ಯಂತ ರೋಮಾಂಚಕಾರಿಯಾಗಿದ್ದ ಅಂತಿಮ ಸುತ್ತಿನಲ್ಲಿ ಬೆಂಗಳೂರಿನ ಕ್ರೈಸ್ಟ್ ಅಕಾಡೆಮಿ ಶಾಲೆ ಟೈಬ್ರೇಕ್ ಮೂಲಕ ಉಡುಪಿ ತಂಡವನ್ನು ಹಿಂದಿಕ್ಕಿ 6ನೇ ಆವೃತ್ತಿಯ ಪ್ರಜಾವಾಣಿ ಕ್ವಿಜ್ ಚಾಂಪಿಯನ್‌ಷಿಪ್ ಗೆದ್ದುಕೊಂಡಿತು.

ಸೆಂಟ್ರಲ್ ಕಾಲೇಜು ಆವರಣದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಗುರುವಾರ ನಡೆದ ಅಂತಿಮ ಸುತ್ತಿನಲ್ಲಿ ಮೈಸೂರು ತಂಡ ಸಹ ಟೈಬ್ರೇಕ್ ಮೂಲಕ ಧಾರವಾಡ ತಂಡವನ್ನು ಹಿಂದಿಕ್ಕಿ ಎರಡನೇ ರನ್ನರ್ ಅಪ್ ಪ್ರಶಸ್ತಿ ಗೆದ್ದುಕೊಂಡಿತು.

ವಿಜೇತರಿಗೆ ಪ್ರಾಥಮಿಕ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮತ್ತು ನಗರ ಸಂಚಾರ ಪೊಲೀಸ್ ಜಂಟಿ ಆಯುಕ್ತ ಡಾ. ಬಿ.ಆರ್. ರವಿಕಾಂತೇಗೌಡ ಬಹುಮಾನ ವಿತರಿಸಿದರು. ‘ಪ್ರಜಾವಾಣಿ’ಯ ಕಾರ್ಯನಿರ್ವಾಹಕ ಸಂಪಾದಕ ರವೀಂದ್ರ ಭಟ್ ಇದ್ದರು.

ಶಿಕ್ಷಣ ಸಚಿವ ಸುರೇಶ್ ಕುಮಾರ್ ವಿಜೇತರಿಗೆ ಬಹುಮಾನ ವಿತರಿಸಿದರು. ಆದಿತ್ಯ ರಾವ್ ಮತ್ತು ಆದಿತ್ಯ ಆಚಾರ್ಯ ಕ್ವಿಜ್ ಚಾಂಪಿಯನ್‌ಗಳಾಗಿ ಹೊರಹೊಮ್ಮಿದರು.

ಬೆಳಿಗ್ಗೆ ನಡೆದ ಬೆಂಗಳೂರು ವಲಯ ಮಟ್ಟದ ಸ್ಪರ್ಧೆಯಲ್ಲಿ 350ಕ್ಕೂ ಆಧಿಕ ಶಾಲೆಗಳ ಸುಮಾರು 800 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.


ಕ್ವಿಜ್ ಚಾಂಪಿಯನ್‌ಗಳಾದ  ಆದಿತ್ಯ ರಾವ್ ಮತ್ತು ಆದಿತ್ಯ ಆಚಾರ್ಯ

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು