ಬೆಂಗಳೂರು: ‘ಪ್ರಜ್ವಲ್ ರೇವಣ್ಣ ಪ್ರಕರಣ ರಾಷ್ಟ್ರೀಯ ಸಮಸ್ಯೆಯಲ್ಲ. ಅದು ವೈಯಕ್ತಿಕವಾಗಿ ಆಗಿದೆ. ಪೊಲೀಸರು ತನಿಖೆ ನಡೆಸುತ್ತಾರೆ’ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಸುದ್ದಿಗಾರರ ಜತೆ ಸೋಮವಾರ ಮಾತನಾಡಿದ ಅವರು, ‘ವೈಯಕ್ತಿಕ ಪ್ರಕರಣವನ್ನು ಜೇಮ್ಸ್ ಬಾಂಡ್ ರೀತಿ ಹಿಗ್ಗಿಸೋಕೆ ಆಗುವುದಿಲ್ಲ. ಅದನ್ನೇ ಕೇಂದ್ರೀಕರಿಸಲು ಆಗುವುದಿಲ್ಲ. ರಾಜ್ಯದಲ್ಲಿ ಬೇರೆ ಬೇರೆ ಸಮಸ್ಯೆಗಳಿವೆ. ಕುಡಿಯುವ ನೀರಿನ ಸಮಸ್ಯೆ ಇದೆ. ಆ ಕಡೆ ಗಮನಹರಿಸಬೇಕು’ ಎಂದರು.

ಪ್ರಕರಣದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪಾತ್ರದ ಕುರಿತ ಆರೋಪದ ಬಗ್ಗೆ ಕೇಳಿದಾಗ, ‘ಪೊಲೀಸರು ತನಿಖೆ ಮಾಡುತ್ತಿದ್ದಾರೆ. ಎಲ್ಲೆಲ್ಲಿ ಸುತ್ತಿ ಎಲ್ಲಿಗೆ ಬಂದು ನಿಲ್ಲುತ್ತೆ ನೋಡೋಣ. ವಿಶೇಷ ತನಿಖಾ ತಂಡ ತನಿಖೆ ನಡೆಸುತ್ತಿದೆ. ಸುಮ್ಮನೆ ಆರೋಪ ಮಾಡಿದರೆ ರಾಜೀನಾಮೆ ಕೊಡಲು ಆಗುತ್ತಾ? ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವ ಅಗತ್ಯವಿಲ್ಲ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.