ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಶಾಂತ್ ಸಂಬರಗಿ ವಿರುದ್ಧ ಎಫ್ಐಆರ್

Last Updated 11 ಸೆಪ್ಟೆಂಬರ್ 2020, 18:46 IST
ಅಕ್ಷರ ಗಾತ್ರ

ಬೆಂಗಳೂರು: ಶಾಸಕ ಜಮೀರ್ ಅಹಮ್ಮದ್ ಖಾನ್ ಬಗ್ಗೆ ಮಾನಹಾನಿಕರ ಹೇಳಿಕೆ ನೀಡಿದ್ದರು ಎನ್ನಲಾದ ವಕೀಲ ಪ್ರಶಾಂತ್ ಸಂಬರಗಿ ವಿರುದ್ಧ ಚಾಮರಾಜಪೇಟೆ ಠಾಣೆಯಲ್ಲಿ ಶುಕ್ರವಾರ ಎಫ್‌ಐಆರ್‌ ದಾಖಲಾಗಿದೆ.

'ಪ್ರಶಾಂತ್ ಸಂಬರಗಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಶಾಸಕ ಜಮೀರ್ ಇತ್ತೀಚೆಗೆ ದೂರು ನೀಡಿದ್ದರು. ಅದರನ್ವಯ ಎನ್‌ಸಿಆರ್ (ಗಂಭೀರವಲ್ಲದ ಅಪರಾಧ) ದಾಖಲಿಸಿಕೊಳ್ಳಲಾಗಿತ್ತು. ಇದೀಗ 24ನೇ ಎಸಿಎಂಎಂ ನ್ಯಾಯಾಲಯದ ನಿರ್ದೇಶನದಂತೆ ಸಂಬರಗಿ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪಶ್ಚಿಮ ವಿಭಾಗದ ಡಿಸಿಪಿ ಸಂಜೀವ್ ಪಾಟೀಲ ತಿಳಿಸಿದರು.

'ಕ್ರಿಮಿನಲ್ ಪಿತೂರಿ (ಐಪಿಸಿ 120 (ಬಿ), ಫೋರ್ಜರಿ (ಐಪಿಸಿ 463), ಸಹಿ ನಕಲು ಮಾಡಿದ (ಐಪಿಸಿ 465) ಹಾಗೂ ಜೀವ ಬೆದರಿಕೆಯೊಡ್ಡಿದ್ದ (ಐಪಿಸಿ 506) ಆರೋಪದಡಿ ಸಂಬರಗಿ ಎಫ್ಐಆರ್ ದಾಖಲಾಗಿದೆ' ಎಂದೂ ತಿಳಿಸಿದರು.

ಶಾಸಕರ ದೂರಿನ ವಿವರ: ‘ನನ್ನ ಬಗ್ಗೆ ಇಲ್ಲಸಲ್ಲದ ಹೇಳಿಕೆ ನೀಡಿ ಸುಳ್ಳು ಆರೋಪ ಮಾಡುತ್ತಿರುವ ಪ್ರಶಾಂತ್ ಸಂಬರಗಿ, ನನ್ನ ಗೌರವಕ್ಕೂ ಚ್ಯುತಿ ತರುತ್ತಿದ್ದಾರೆ. ಪ್ರವಾಸ ಹಾಗೂ ಟಿಕೆಟ್‌ ಹೆಸರಿನಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಬೆದರಿಕೆ ಹಾಕುತ್ತಿದ್ದಾರೆ' ಎಂದು ಪೊಲೀಸರಿಗೆ ನೀಡಿದ್ದ ದೂರಿನಲ್ಲಿ ಜಮೀರ್ ಆರೋಪಿಸಿದ್ದಾರೆ.

‘ನನ್ನ ಬಗ್ಗೆ ಅಪಪ್ರಚಾರ ಮಾಡುತ್ತಿರುವ ಹಾಗೂ ಸಂಬಂಧವಿಲ್ಲದ ವಿಷಯದಲ್ಲಿ ನನ್ನ ಹೆಸರು ಎಳೆದು ತರುತ್ತಿರುವ ಸಂಬರಗಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಿ’ ಎಂದೂ ಜಮೀರ್‌ ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT