ಬೆಂಗಳೂರು: ರಾಜ್ಯ ಆಂತರಿಕ ಭದ್ರತಾ ವಿಭಾಗದ (ಐಎಸ್‌ಡಿ) ಪೊಲೀಸ್ ಮಹಾನಿರ್ದೇಶಕರಾಗಿದ್ದ (ಡಿಜಿಪಿ) ಸಿ.ಎಚ್.ಪ್ರತಾಪ್ ರೆಡ್ಡಿ ಅವರು ತಮ್ಮ ಸ್ಥಾನಕ್ಕೆ ಸಲ್ಲಿಸಿದ್ದ ರಾಜೀನಾಮೆಯನ್ನು ರಾಜ್ಯ ಸರ್ಕಾರವು ಅಂಗೀಕರಿಸಿದೆ.

1991ನೇ ಬ್ಯಾಚ್ ಐಪಿಎಸ್ ಅಧಿಕಾರಿ ಆಗಿರುವ ಪ್ರತಾಪ್ ರೆಡ್ಡಿ ಅವರ ಸೇವಾವಧಿ ಜೂನ್ 30ರವರೆಗಿತ್ತು. ಇದರ ನಡುವೆಯೇ ಸ್ವಯಂನಿವೃತ್ತಿ ಕೋರಿ ಜ.22ರಂದು ಅವರು ಸರ್ಕಾರಕ್ಕೆ ಪತ್ರ ಬರೆದಿದ್ದರು. ಫೆ.17ರಂದು ರಾಜೀನಾಮೆ ಅಂಗೀಕರಿಸಲಾಗಿದ್ದು, ಏಪ್ರಿಲ್ 30ರಂದು ಸೇವೆಯಿಂದ ಬಿಡುಗಡೆ ಆಗಲಿದ್ದಾರೆ.

ಆಂಧ್ರಪ್ರದೇಶ ಗುಂಟೂರು ಜಿಲ್ಲೆಯ ಪ್ರತಾಪ್ ರೆಡ್ಡಿ, ಬಿ.ಟೆಕ್ ಪದವೀಧರರು. ಹಾಸನ ಜಿಲ್ಲೆಯ ಸಹಾಯಕ ಪೊಲೀಸ್ ಅಧೀಕ್ಷಕರಾಗಿ ವೃತ್ತಿ ಆರಂಭಿಸಿದ್ದರು. ನಂತರ, ಹಲವು ಜಿಲ್ಲೆ ಹಾಗೂ ಕಮಿಷನರೇಟ್ ವ್ಯಾಪ್ತಿಯಲ್ಲಿ ಕೆಲಸ ಮಾಡಿದ್ದರು. ನಗರದ 37ನೇ ಪೊಲೀಸ್ ಕಮಿಷನರ್ ಆಗಿಯೂ ಕರ್ತವ್ಯ ನಿರ್ವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.