ಭಾನುವಾರ, ಜನವರಿ 17, 2021
27 °C
ಬವೇರಿಯಾ ಪೊಲೀಸ್‌ ತಂಡದಿಂದ ತರಬೇತಿ

ಮಹಿಳಾ ಸುರಕ್ಷತೆಗೆ ಕ್ರಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾತ್ರಿ ವೇಳೆ ಸಂಚರಿಸುವ ಮಹಿಳೆಯರಿಗೆ ಹೆಚ್ಚಿನ ಸುರಕ್ಷತೆ ನೀಡಬೇಕು ಎಂದು ಉಪಮುಖ್ಯಮಂತ್ರಿ ಜಿ.ಪರಮೇಶ್ವರ ಹಿರಿಯ ಪೊಲೀಸ್‌ ಅಧಿಕಾರಿಗಳಿಗೆ ಸೂಚಿಸಿದರು.

ವಿಧಾನಸೌಧದಲ್ಲಿ ಗುರುವಾರ ನಡೆದ ಆ್ಯಪ್‌ ಆಧಾರಿತ ಟ್ಯಾಕ್ಸಿ ಸೇವೆ ಆರಂಭಿಸುವ ಕುರಿತ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ರಾತ್ರಿ ವೇಳೆ ಸುರಕ್ಷತೆ ಕಲ್ಪಿಸಲು ನಗರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಬೇಕು ಎಂದು ಅವರು ಸಲಹೆ ನೀಡಿದರು.

ಮಹಿಳಾ ಸುರಕ್ಷತೆಗೆ ಇರುವ ಕಾನೂನು, ಕಾರ್ಯಕ್ರಮಗಳು ಮತ್ತು ಸಹಾಯವಾಣಿಯ ಬಗ್ಗೆ ಜಾಹೀರಾತುಗಳ ಮೂಲಕ ಪರಿಣಾಮಕಾರಿ ಯಾಗಿ ಜನರಿಗೆ ತಲುಪಿಸಬೇಕು. ನಿರ್ಭಯ ಯೋಜನೆಯಡಿ ಸಾಕಷ್ಟು ಅನುದಾನವಿದೆ.  ಅದನ್ನು ಬಳಸಿ 5,000 ಸಿಸಿ ಕ್ಯಾಮೆರಾ, 1 ಸಾವಿರ ದ್ವಿಚಕ್ರ ವಾಹನಗಳು ಮತ್ತು ಜೀಪ್‌ ಮುಂತಾದ ವಾಹನಗಳನ್ನು ಖರೀದಿಸಬೇಕು ಎಂದ ಅವರು, ಬವೇರಿಯಾ ಪೊಲೀಸ್ ತಂಡದಿಂದ ಬೆಳಗಾವಿ ಜಿಲ್ಲೆ ಪೊಲೀಸರಿಗೆ ತರಬೇತಿ ನೀಡಲಾಗುವುದು ಎಂದು ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು