ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬೆನ್ನು ಮೂಳೆ ಸಂಬಂಧಿ ಸಮಸ್ಯೆಗಳು ವ್ಯಕ್ತಿಯ ದೈನಂದಿನ ಜೀವನದ ಮೇಲೆ ಗಮನಾರ್ಹ ಪರಿಣಾಮ ಬೀರುತ್ತವೆ. ವಯಸ್ಸಾದಂತೆ ಬೆನ್ನುಮೂಳೆ ತನ್ನ ಗಡಸುತನವನ್ನು ಕಳೆದುಕೊಳ್ಳುತ್ತದೆ. ಬೆನ್ನು ಹುರಿ ಸೇರಿ ವಿವಿಧ ಶಸ್ತ್ರಚಿಕಿತ್ಸೆಗಳನ್ನು ಸಾಂಪ್ರದಾಯಿಕ ವಿಧಾನದಲ್ಲಿ ನಡೆಸಿದರೆ ರೋಗಿ ಚೇತರಿಸಿಕೊಳ್ಳಲು ಹೆಚ್ಚಿನ ಅವಧಿ ಅಗತ್ಯ. ರೊಬೊಟಿಕ್ ಶಸ್ತ್ರಚಿಕಿತ್ಸೆಯಲ್ಲಿ ಗಾಯದ ಪ್ರಮಾಣವೂ ಕಡಿಮೆ ಇರುವುದರಿಂದ ವ್ಯಕ್ತಿ ಬೇಗ ಚೇತರಿಸಿಕೊಳ್ಳುತ್ತಾನೆ. ಇದರಿಂದಾಗಿ ಆಸ್ಪತ್ರೆ ವಾಸದ ಅವಧಿಯೂ ಕಡಿತ ಆಗಲಿದೆ’ ಎಂದು ಹೇಳಿದರು.